ರಿಪ್ಪನ್‌ಪೇಟೆ – ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ|Rpet

ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 60 ವರ್ಷದ ಪಟ್ಟಣದಲ್ಲಿ ಛತ್ರಿ ರಿಪೇರಿ ಮಾಡಿಕೊಂಡಿದ್ದ ವ್ಯಕ್ತಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮೃತನನ್ನು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರೆಹೊಂಡದ ಗಂಗಪ್ಪ ಎನ್ನಲಾಗುತ್ತಿದೆ.

Read More

ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ‌ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ಬದಲಾಗಿ ರಾಜ್ಯದ ಬಡ ಜನತೆಗೆ ಪಡಿತರ ವಿತರಣೆ ಮಾಡುವ ಉದ್ದೇಶಕ್ಕೆ ಎನ್ನುವುದನ್ನು ರಾಜ್ಯ ಬಿಜೆಪಿ ಮುಖಂಡರು ಅರಿಯಲಿ. ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ…

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ನಾಳೆ(25-06-23) ರಿಪ್ಪನ್‌ಪೇಟೆ ಪೊಲೀಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಪೊಲೀಸ್ ,ಮೆಗ್ಗಾನ್ ರಕ್ತಕೇಂದ್ರ ಹಾಗೂ ಪಟ್ಟಣದ ಪೊಲೀಸ್ ಠಾಣೆ ಸಹಯೋಗದೊಂದಿಗೆ ಭಾನುವಾರ(25-06-23) ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ನಂದಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪವಿತ್ರ ರಕ್ತದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಕೋರಿದೆ. ನೂತನ ಪಿಎಸ್ ಐ ಎಸ್ ಪಿ ಪ್ರವೀಣ್ ಜನಸ್ನೇಹಿ ಆಡಳಿತಕ್ಕೆ ಹೆಚ್ಚು ಒತ್ತು ನೀಡುತಿದ್ದು ಪೊಲೀಸರು ಕೇವಲ ಹೆಲ್ಮೇಟ್ ದಂಡ,ಲೈಸೆನ್ಸ್ ದಂಡ ಮತ್ತು…

Read More

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಡಿ ಗೃಹ ಜ್ಯೋತಿ ಕಾರ್ಡ್ ನೋಂದಣಿಗೆ ಗ್ರಾಮ ಒನ್ ಮತ್ತು ಸೇವಾಸಿಂಧು ಗಳಿಗೆ ನೀಡುವ ಮೂಲಕ ಉಚಿತ ನೋಂದಣಿಯೆಂದು ಹೇಳಲಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಕೆಲವು ಸೇವಾಸಿಂಧು ಮತ್ತು ಗ್ರಾಮ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಂದ ಮನಸ್ಸಿಗೆ ಬಂದಂತೆ 50,100…

Read More

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗೆ ಹೃದಯಾಘಾತ – ಸಮಯ ಪ್ರಜ್ಞೆ ಮೆರೆದ ಆ್ಯಂಬುಲೆನ್ಸ್‌ ಡ್ರೈವರ್‌ಗಳು|heart attack

ತೀರ್ಥಹಳ್ಳಿ: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿಯಲ್ಲಿ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ. ಶುಕ್ರವಾರ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡಕ್ಟರ್, ಡ್ರೈವರ್‌ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್‌ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾನೆ. ಸಮಯಕ್ಕೆ ಸರಿಯಾಗಿ ಬಸ್‌ನ್ನ ಆಸ್ಪತ್ರೆಗೆ ಚಲಾಯಿಸಿದ ಡ್ರೈವರ್ ಹಾಗೂ ಕಂಡಕ್ಟರ್, ಅಲ್ಲಿ ಪ್ರಯಾಣಿಕನನ್ನ ದಾಖಲಿಸಿ, ಮುಂದಕ್ಕೆ ಹೋಗಿದ್ದಾರೆ. ಆ್ಯಂಬುಲೆನ್ಸ್‌ ಡ್ರೈವರ್‌ಗಳ ಮಾನವೀಯತೆ: ಇನ್ನೂ…

Read More

ಬಸ್ಸು ಮತ್ತು ಕಾರಿನ ನಡೆವೆ ಭೀಕರ ಅಪಘಾತ – ಓರ್ವ ಗಂಭೀರ|accident

ಬಸ್ಸಿಗೆ ಡಿಕ್ಕಿ ಹೊಡೆದ ಕಾರು – ಒಬ್ಬರಿಗೆ ಗಂಭೀರ ಗಾಯ   ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ. ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ…

Read More

ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು ಕೊಂಡಿರುವ ಸುದೀಪ ದರ್ಶನ್ ರವರನ್ನು ಹಲವು ಬಾರಿ ಭೇಟಿ ಮಾಡಲು ಪ್ರಯತ್ನಿಸಿ ವಿಫಲನಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನ ಬಗ್ಗೆ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಕಳೆದ ವಾರ ಯುವಕನನ್ನು ಆತನ ಮನೆಯಲ್ಲಿ ಭೇಟಿ ಮಾಡಿ ಸಂದರ್ಶಿಸಿ ಈ…

Read More

ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಮದೂರು ಮತ್ತು ಹೊನಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗ್ಗೆ ಗಣಿಗಾರಿಕೆ ನಡೆಸುತಿದ್ದ ಪ್ರದೇಶಕ್ಕೆ ದಾಳಿ ನಡೆಸಿ ಎರಡು ಲಾರಿ ,ಒಂದು ಟ್ರಾಕ್ಟರ್ ಮತ್ತು ಜಂಬಿಟ್ಟಿಗ್ಗೆ ಕೊಯ್ಯುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಭೂ ಮತ್ತು ಗಣಿ…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More