ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ.
2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್ (ಮೆಕ್ಯಾನಿಕಲ್), ಇಂಡಸ್ಟ್ರೀಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನಿಫ್ಯಾಕ್ಚರಿಂಗ್ ಟೆಕ್ನಿಷಿಯನ್, ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ ಟೂಲ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೋಸಸ್ ಕಂಟ್ರೋಲ್ ಮತ್ತು ಆಟೋಮಿಷನ್ ಕೋರ್ಸ್ಗಳಿಗೆ ಪ್ರವೇಶಗಳು ಲಭ್ಯವಿದೆ.
ಆಸಕ್ತರು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಆಧಾರ್ಕಾರ್ಡ್, 4 ಇತ್ತೀಚಿನ ಪಾಸ್ಪೋರ್ಟ್ ಭಾವಚಿತ್ರಗಳು, ಅಭ್ಯರ್ಥಿಗಳ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸಗಳೊಂದಿಗೆ ಭೇಟಿ ನೀಡಿ ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9448530349/ 9449775239 ಗಳನ್ನು ಸಂಪರ್ಕಿಸುವುದು.
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…