POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ

ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಮದೂರು ಮತ್ತು ಹೊನಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗ್ಗೆ ಗಣಿಗಾರಿಕೆ ನಡೆಸುತಿದ್ದ ಪ್ರದೇಶಕ್ಕೆ ದಾಳಿ ನಡೆಸಿ ಎರಡು ಲಾರಿ ,ಒಂದು ಟ್ರಾಕ್ಟರ್ ಮತ್ತು ಜಂಬಿಟ್ಟಿಗ್ಗೆ ಕೊಯ್ಯುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ರಶ್ಮಿ ರವರ ನೇತೃತ್ವದಲ್ಲಿ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಮತ್ತು ಹೊನ್ನಕೊಪ್ಪ ಗ್ರಾಮದಲ್ಲಿ ಅವ್ಯಾಹತವಾಗಿ ನಡೆಯುತಿದ್ದ ಅಕ್ರಮ ಗಣಿಗಾರಿಕೆ ಮೇಲೆ ದಾಳಿ ನಡೆಸಿ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಹೆಚ್ಚಿನ ತನಿಖೆಗಾಗಿ ವಾಹನಗಳನ್ನು ರಿಪ್ಪನ್‌ಪೇಟೆ ಪೊಲೀಸ್  ಠಾಣೆ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.