Headlines

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ.

2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17  ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್​ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ  ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್​ಶೀಟ್ ಸಲ್ಲಿಸಿದ್ದರು.  

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ನ್ಯಾಯಾಲಯ ಇದೀಗ ತೀರ್ಪು ನೀಡಿದೆ. 

ಆರೋಪಿತನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,50,000 /- ರೂ ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.  

Leave a Reply

Your email address will not be published. Required fields are marked *