ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಜೂಜಿನಲ್ಲಿ ತೊಡಗಿದ್ದ ಆರೋಪದ ಮೇರೆಗೆ 10 ಜನರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 25,300 ರೂ.ಹಾಗೂ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ರಂಗನಾಥ್, ಗಾದಿ ಲಿಂಗಪ್ಪ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.
ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.