ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು ಅಂತರ್ ಜಿಲ್ಲಾ ಬೈಕ ಕಳ್ಳರನ್ನು ಬಂಧಿಸಿದ್ದಾರೆ.
ಇತ್ತೀಚಿಗೆ ಶೇಖರಪ್ಪ ಎಂಬವರ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ.
ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ್ ಶಿರಾಳಕೊಪ್ಪ ಪೊಲೀಸರು ನಿನ್ನೆ ದಿನಾಂಕಃ 30-06-2023 ರಂದು ಆರೋಪಿಗಳನ್ನ ಬಂಧಿಸಿದ್ದಾರೆ.
ರಫೀಕ್ ಸಾಬ್ ಸವಣೂರ @ ರಫೀಕ್, 28 ವರ್ಷ, ಮಾಸೂರು ಗ್ರಾಮ ಹಿರೇಕೆರೂರು ಹಾವೇರಿ ಜಿಲ್ಲೆ ,ಮಹಮ್ಮದ್ ಅಫ್ರಿದಿ @ ಅಫ್ರಿದಿ, 23 ವರ್ಷ, ಮಾಸೂರು ಗ್ರಾಮ ಹಿರೇಕೆರೂರು ಹಾವೇರಿ ಜಿಲ್ಲೆ ರನ್ನು ಬಂಧಿಸಿದ್ದಾರೆ.
ಈ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಆರು ಜಿಲ್ಲೆಗಳ ವಿವಿಧ ಸ್ಟೇಷನ್ಗಳ ಕೇಸ್ಗಳು ಬಗೆಹರಿದಿವೆ..
ಶಿರಾಳಕೊಪ್ಪ ಪೊಲೀಸ್ ಠಾಣೆಯ 01, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ 01, ಆನವಟ್ಟಿ ಪೊಲೀಸ್ ಠಾಣೆಯ 01, ಹಿರೆಕೆರೂರು ಪೊಲೀಸ್ ಠಾಣೆಯ 01, ಹಾನಗಲ್ ಪೊಲೀಸ್ ಠಾಣೆಯ 01, ಕೋಟೆ ಪೊಲೀಸ್ ಠಾಣೆಯ 01, ಅಜ್ಜಂಫುರ ಪೊಲೀಸ್ ಠಾಣೆಯ 01, ಶಿರಸಿ ಟೌನ್ ಪೊಲೀಸ್ ಠಾಣೆಯ 01, ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯ 01, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ 01 ಮತ್ತು ವಿದ್ಯಾನಗರ ಪೊಲೀಸ್ ಠಾಣೆಯ 01 ಪ್ರಕರಣ ಸೇರಿದಂತೆ ಒಟ್ಟು 11 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 3,96,000/- ರೂಗಳ 11 ಬೈಕ್ ಗಳನ್ನು ಪೊಲೀಸರು ಅಮಾನತ್ತು ಪಡಿಸಿಕೊಂಡಿದ್ಧಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್