ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ.
2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್ಶೀಟ್ ಸಲ್ಲಿಸಿದ್ದರು.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ನ್ಯಾಯಾಲಯ ಇದೀಗ ತೀರ್ಪು ನೀಡಿದೆ.
ಆರೋಪಿತನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,50,000 /- ರೂ ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…