ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!!Train

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!

ರಿಪ್ಪನ್‌ಪೇಟೆ : ಮೈಸೂರು-ಬೆಂಗಳೂರು-ಶಿವಮೊಗ್ಗ-ಸಾಗರ -ತಾಳಗುಪ್ಪ ಮಾರ್ಗದ ಇಂಟರ್ ಸಿಟಿ ರೈಲು ಆರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲದೆ ಇರುವುದರಿಂದ ಮಲೆನಾಡಿನ ಪ್ರಯಾಣಿಕರಿಗೆ ರೈಲು ಹತ್ತಿ ಇಳಿಯುವ ಯೋಗ ಇನ್ನೂ ಕೂಡಿ ಬಂದಿಲ್ಲ.

ಈ ಹಿಂದೆ ತಾಳಗುಪ್ಪದಿಂದ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದು ಅದು ಈಗ ಶಿವಮೊಗ್ಗಕ್ಕೆ ಬಂದು ಅಲ್ಲಿಂದ ಭರ್ತಿಯಾಗಿ ಹೋಗುತ್ತಿದೆ ಇದರಿಂದ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ ಗ್ರಾಮಾಂತರದ ರೈತ ನಾಗರೀಕರು ಮತ್ತು ನಿರುದ್ಯೋಗಿ ವಿದ್ಯಾವಂತ ಯುವಕರಿಗೆ ಹಾಗು ವಯೋವೃದ್ದರಿಗೆ ಆನಾರೋಗ್ಯ ಪೀಡಿತರಿಗೆ ಹೆಚ್ಚು ಹೋಗಿ ಬರುವ ಪ್ಯಾಸೆಂಜರ್‌ಗಳಿಗೆ ಅನುಕೂಲವಾಗುವುದರೊಂದಿಗೆ ಹಣ ಉಳಿತಾಯವಾಗುತ್ತಿತ್ತು. ಇಂಟರ್ ಸಿಟಿ ರೈಲು ಅರಸಾಳಿನಲ್ಲಿ ನಿಲುಗಡೆ ಮಾಡಲು ಸರಿಯಾದ ಪ್ಲಾಟ್‌ಪಾರಂ ಇಲ್ಲದೇ ಇರುವುದನ್ನೇ ಮುಂದಿಟ್ಟುಕೊಂಡು ರೈಲ್ವೆ ಇಲಾಖೆಯವರು ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ಎಕ್ಸ್ಪ್ರಸ್ ರೈಲು ಓಡಾಡುತ್ತಿದ್ದೆಯೇ ಹೊರತು ನಿಲ್ದಾಣದಲ್ಲಿ ನಿಲ್ಲದೇ ಪ್ರಯಾಣಿಕರ ಹತ್ತಿ ಇಳಿಯದ ಸ್ಥಿತಿ ಎದುರಾಗಿದೆ.

ಸಂಸದ ಬಿ.ವೈ.ರಾಘವೇಂದ್ರರವರ ಹೆಚ್ಚಿನ ಮುತುರ್ವಜಿಯಿಂದಾಗಿ ಸಾರ್ವಜನಿಕರ ಬೇಡಿಕೆಯನ್ನಾದರಿಸಿ ಕೋಟ್ಯಾಂತರ ರೂಪಾಯಿ ಹಣವನ್ನು ಬಿಡುಗಡೆಗೊಳಿಸಿ ಅರಸಾಳು ರೈಲ್ವೆ ನಿಲ್ದಾಣವನ್ನು ಆಭಿವೃದ್ದೀ ಪಡಿಸುವುದರೊಂದಿಗೆ ಪ್ಲಾಟ್‌ಪಾರಂ ಸಹ ನಿರ್ಮಿಸಲಾಗಿದ್ದು ಮಾಲ್ಗೂಡಿ ಮ್ಯೂಸಿಯಮ್ ಸಹ ನಿರ್ಮಿಸಲಾಗಿ ಇದರ ಉದ್ಘಾಟನೆಯನ್ನು ಆಂದಿನ ರೈಲ್ವೆ ಸಚಿವ ಸುರೇಶ್ ಅಂಗಡಿ ವರ್ಚುವಲ್ ಮೂಲಕ ಲೋಕಾರ್ಪಣೆ ಮಾಡಲಾಗಿದ್ದರೂ ಕೂಡಾ ಈ ವರಗೂ ಮಲೆನಾಡ ಪ್ರದೇಶದ ರೈತಾಪಿ ವರ್ಗದವರಿಗೆ ರೈಲು ಪ್ರಯಾಣ ಮೇರಿಚಿಕೆಯಾಗಿದೆ. ಡಬಲ್ ಇಂಜಿನ್ ಸರ್ಕಾರವಿದ್ದಾಗ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಾಗೂ ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಹೀಗೆ ಎಲ್ಲರ ಗಮನಸೆಳೆಯಲಾದರೂ ಕೂಡಾ ಈ ವರಗೂ ಸ್ಪಂದಿಸದೇ ನಿರ್ಲಕ್ಷö್ಯ ವಹಿಸಿದ್ದಾರೆ.ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿರುವ ಮತದಾರರು ಮುಂದಿನ ವರ್ಷದಲ್ಲಿ ಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರ ಬಳಿ ಮತಯಾಚನೇ ಹೇಗೆ ಮಾಡುತ್ತಾರೆಂಬ ಬಗ್ಗೆ ಮಲೆನಾಡಿನ ರೈತಾಪಿವರ್ಗದವರಲ್ಲಿ ಪಿಸುಗುಟ್ಟುವಂತಹ ವಸ್ತುವಾಗಿ ರೂಪುಗೊಳ್ಳುತ್ತಿರುವುದು ಕೇಳಿಬರುತ್ತಿದೆ.

ಇನ್ನಾದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರರವರು ತಕ್ಷಣ ಗಮನಹರಿಸಿ ಮಲೆನಾಡಿನ ವ್ಯಾಪ್ತಿಯ ಬಾಳೆಕೊಪ್ಪ ಹಾರನಹಳ್ಳಿ ಕುಂಸಿ ಆರಸಾಳು ಕೆಂಚನಾಲ ಆನಂದಪುರ ಮಾರ್ಗದ ಸಾಗರ ತಾಳಗುಪ್ಪಕ್ಕೆ ಪ್ಯಾಸೆಂಜರ್ ರೈಲು ಓಡಿಸುವುದು ಹಾಗೂ ಮೈಸೂರು ಬೆಂಗಳೂರು ಇಂಟರ್ ಸಿಟಿ ರೈಲು ಅರಸಾಳು ನಿಲ್ದಾಣದಲ್ಲಿ ನಿಲುಗಡೆ ಮಾಡುವ ಮೂಲಕ ಮಲೆನಾಡಿನ ಮತದಾರರ ಮನಗೆಲ್ಲುವತ್ತ ಮುಂದಾಗುವರೇ ಕಾದುನೋಡುವಂತಾಗಿದೆ.

ಆರಸಾಳು ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ಮತ್ತು ಪ್ಯಾಸೆಂಜರ್ ರೈಲು ನಿಲುಗಡೆಯಿಂದಾಗಿ ಸೂಡೂರು,9ನೇ ಮೈಲಿಕಲ್ಲು ಅರಸಾಳು,ಹಾರೋಹಿತ್ತಲು,ಬಸವಾಪುರ,ಬೆಳ್ಳೂರು,ಬುಕ್ಕಿವರೆ ಆಲಸೆ,ಕೋಣಂದೂರು,ತೀರ್ಥಹಳ್ಳಿ,ಆರಗ,ಸೊನಲೆ,ಜೈನಗರ,ಹೊAಬುಜ ಅತಿಶಯ ಮಹಾಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ,ಸಿಗಂದೂರು,ಕೊಡಚಾದ್ರಿ,ಹೊಸನಗರ,ಬೈಂದೂರು,ಭಟ್ಕಳ,ಕೋಡೂರು,ಅಮೃತ,ಹೆದ್ದಾರಿಪುರ,ಹರತಾಳು,ಹಾಲುಗುಡ್ಡೆ,ಬಾಳೂರು ಹೀಗೆ ಹತ್ತು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೇಂದ್ರವಾಗಿರುವ ಈ ರೈಲ್ವೆ ನಿಲ್ದಾಣದಲ್ಲಿ ಇನ್ನಾದರೂ ರೈಲು ನಿಲ್ಲುವಂತೆ ಮಾಡಲು ಮುಂದಾಗುವರೇ ಕಾದುನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago