ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ.
ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ ನಿಂತಿದ್ದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆ ಮಹಮ್ಮದ್ ಪಾಷಾ ಅವರಿಗೆ ಗುದ್ದಿದ ಕಾರಣ ಈ ಅವಘಡ ಸಂಭವಿಸಿದೆ.
ಆಗುಂಬೆ ಘಾಟ್ ನಿಂದ 25 ರಿಂದ 30 ಅಡಿ ಕೆಳಗಡೆ ಬಿದ್ದ ಭಾಷಗೆ ಗಂಭೀರ ಗಾಯವಾಗಿದ್ದು ಮೇಲಿನಿಂದ ಬಿದ್ದ ರಭಸಕ್ಕೆ ಭಾಷ ಅವರ ಸೊಂಟ ಮತ್ತು ತಲೆಗೆ ಪೆಟ್ಟು ಬಿದ್ದಿದೆ. ಕೂಡಲೇ ಸ್ಥಳದಲ್ಲಿದ್ದಲಿದ್ದ ಹಿಂದೂ ಜಾಗರಣೆ ವೇದಿಕೆಯ ಸದಸ್ಯರು ಮಹಮ್ಮದ್ ಪಾಷಾರನ್ನ ರಕ್ಷಣೆ ಮಾಡಿದ್ದಾರೆ.
ಹಿಂದೂ ಜಾಗರಣೆ ವೇದಿಕೆಯ ನಿತ್ಯಾನಂದ ನೇತೃತ್ವದ ತಂಡದಿಂದ ಆಗುಂಬೆ ಘಾಟ್ ಕೆಳಗಡೆ ಇಳಿದು ಮಹಮ್ಮದ್ ಪಾಷಾರನ್ನ ಬೆಡ್ ಶೀಟ್ ಹಾಗೂ ಹಗ್ಗದ ಸಹಾಯದಿಂದ ಮೇಲೆತ್ತಿದ್ದಾರೆ. ಹಿಂದು ಜಾಗರಣೆ ವೇದಿಕೆಯ ನಿತ್ಯಾನಂದ ಮತ್ತು ತಂಡದ ರಕ್ಷಣಾ ಕಾರ್ಯಕ್ಕೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್