ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು.


ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು ಹೊಂದಲು ದೇವರಲ್ಲಿ ಶರಣು ಹೊಂದುತ್ತಾನೆ. ಅನೇಕ ವಿಕಲ್ಪಗಳಿಂದ ದೂರವಾಗಲು ಸಂಕಲ್ಪಗಳನ್ನು ಮಾಡುತ್ತಾನೆ. ದೇವರಂತೆ ನಿರ್ವಿಕಲ್ಪನಾಗಬಯಸಿ ನಡೆದಲ್ಲಿ ಉತ್ತಮ ಮಾನವನಾಗಬಹುದು. ಹಾಗಾಗಿಯೇ “ವಂದೇ ತದ್ಗುಣಲಬ್ದಯೇ” ಅಂದರೆ ದೇವರಲ್ಲಿರುವ ಗುಣಗಳನ್ನು ಹೊಂದುವ ಬಯಕೆಯಿಂದ ನನ್ನಲ್ಲಿರುವ ದೋಷಗಳಿಂದ ಮುಕ್ತನಾಗಬಯಸುತ್ತೇನೆ ಎಂಬ ಪ್ರಾರ್ಥನೆ ಯಶಸ್ಸಿನ ಸೋಪಾನ.

ನಮ್ಮ ಸಂಸ್ಕೃತಿಯಲ್ಲಿ ಆಚರಣೆಗಳಲ್ಲಿ ಉದಾತ್ತ ಸಂದೇಶಗಳಿವೆ. ಬದುಕು ಸುಂದರವಾಗಬೇಕೆಂದರೆ ಅದನ್ನು ಕಲೆಯಾಗಿ ಸ್ವೀಕರಿಸಿದರೆ ಆಸಕ್ತಿ ಬಂದೀತು. ಅನೇಕ ವರ್ಣಗಳಿಂದ  ಚಿತ್ರವು ಆಕರ್ಷಿಸುವಂತೆ ಒಳ್ಳೆಯ ಗುಣಗಳಿಂದ ವ್ಯಕ್ತಿತ್ವವು ಶೋಭಿಸುತ್ತದೆ.

“ದೇಶ, ಕಾಲ, ಪರಿಸ್ಥಿತಿ, ಯಾವುದೇ ಬದಲಾದರೂ, ವ್ಯಕ್ತಿಯನ್ನು ಗುರುತಿಸುವ ಮಾನದಂಡ ಮಾತ್ರ ವ್ಯಕ್ತಿತ್ವ. ಒಳ್ಳೆಯ ಸದ್ಗುಣಗಳನ್ನು ಜೀವನದಲ್ಲಿ ಪೋಷಿಸಿಕೊಳ್ಳಬೇಕು. ಉತ್ತಮ ಸಮಾಜಕ್ಕಾಗಿ ವ್ಯಕ್ತಿತ್ವ ನಿರ್ಮಾಣದ ಅಗತ್ಯತೆಯಿದೆ” ಎಂದರು.

ಜೂನ್ 24 ರಿಂದ 28ರವರೆಗೆ ಜಿನಾಗಮ ವಿಧಾನದಲ್ಲಿ ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹಾಗೂ ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಪೂಜಾ ವಿಧಿ-ವಿಧಾನಗಳ ನೇತೃತ್ವ ವಹಿಸಿ, ಪ್ರವಚನ ನೀಡಿ ಹರಸಿದರು.

ವಿಧಿ-ವಿಧಾನಗಳನ್ನು ಸೊಲ್ಲಾಪುರದ ಪ್ರತಿಷ್ಠಾಚಾರ್ಯ ಪ್ರೋ. ಡಾ. ಮಹಾವೀರ ಶಾಸ್ತಿçಯವರು ನಡೆಸಿಕೊಟ್ಟರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

13 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

20 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago