ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job

2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.


ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಅರ್ಜಿ ನಮೂನೆಗಳನ್ನು ಎನ್ಹೆಚ್‌ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು. ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30 ರವರೆಗೆ ನಡೆಸಲಾಗುವುದು.


ತಜ್ಞವೈದ್ಯರು ಮತ್ತು ವೈದ್ಯರು 70 ವರ್ಷಕ್ಕಿಂತ ಕಡಿಮೆ ಇದ್ದು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು. ಕೆಎಂಸಿಯ ನೋಂದಣಿಯನ್ನು ಹೊಂದಿರತಕ್ಕದ್ದು. ಹಾಗೂ ಸರ್ಕಾರದ ನಿಯಮಾವಳಿಯಂತೆ ಎನ್ಹೆಚ್‌ಎಂ/ಎನ್ಯುಹೆಚ್‌ಎಂ ಮಾರ್ಗಸೂಚಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು. ಹುದ್ದೆಗಳಿಗೆ ನಮೂದಿಸಿರುವ ವೇತನದಲ್ಲಿ ತಜ್ಞವೈದ್ಯರಿಗೆ ಮತ್ತು ವೈದ್ಯರಿಗೆ ಆದಾಯ ತೆರಿಗೆ ಹಾಗೂ ಉಳಿದ ಹುದ್ದೆಗಳಿಗೆ ಭವಿಷ್ಯನಿಧಿ/ವೃತ್ತಿ ತೆರಿಗೆ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಪ್ರಕಾರ ತೆರಿಗೆ ಇತ್ಯಾದಿ ಕಟಾವಣೆ ಮಾಡಲಾಗುವುದು.

ಎನ್ಹೆಚ್‌ಎಂ/ಎನ್ಯುಹೆಚ್‌ಎಂ ಮಾರ್ಗಸೂಚಿಯಂತೆ ನೇಮಕಾತಿಯ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಘಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ಕಿ.ಪು.ಆ ಸಹಾಯಕರ ಹುದ್ದೆಗೆ ಸಂಬಂಧಿಸಿದಂತೆ ವಾಸಸ್ಥಳದ ಬಗ್ಗೆ ಪಾಲಿಕೆ/ಸಂಬಂಧಿಸಿದ ಪಂಚಾಯತ್ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರದೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 08182-200337 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

42 minutes ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

9 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

22 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

23 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago