ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ನವದುರ್ಗ ಬಸ್ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಆನೆ ಕ್ಯಾಂಪ್ಗೂ ಮೊದಲು ಸಿಗುವ ಫಿಶ್ ಹೋಟೆಲ್ನ ಸಮೀಪ ಘಟನೆ ಸಂಭವಿಸಿದೆ. ಆಕ್ಸಿಡೆಂಟ್ನಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ಧಾರೆ.
ಇನ್ನೂ ತಕ್ಷಣವೇ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮೃತ ವ್ಯಕ್ತಿ ಹಾಗೂ ಗಾಯಾಳುಗಳ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.