w
Headlines
Home » ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ|self harming

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ|self harming

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ

ದಾವಣಗೆರೆ : ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇದ್ದರು.

ದಾವಣಗೆರೆ ಜಿಲ್ಲೆಯ ಕಾಲೇಜೊಂದರ ಕಟ್ಟಡದಲ್ಲಿ ಯುವಕ-ಯುವತಿಯ ಖಾಸಗಿ ಕ್ಷಣಗಳನ್ನು ಎದುರಿನ ಕಾಲೇಜು ಕಟ್ಟಡದಿಂದ ಯಾರೋ ಮೊಬೈಲ್ ನಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಶುಕ್ರವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಖಾಸಗಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಮನನೊಂದು ತುಂಬಿಗೆರೆ ಗ್ರಾಮದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇತ್ತ ಆಲೂರಟ್ಟಿ ತಾಂಡಾದ ರತನ್ (20) ನಿನ್ನೆ (ಜು.29) ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ. ಆದರೆ ಆತನೂ ರಾತ್ರಿ ಹಾಸ್ಟೆಲ್‌ ಸಮೀಪದಲ್ಲಿದ್ದ ಮರಕ್ಕೆ ನೇಣಿ ಬಿಗಿದುಕೊಂಡು ಮೃತಪಟ್ಟಿದ್ದಾನೆ.

ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ. ವಿಡಿಯೋ ಹರಿ ಬಿಟ್ಟವರ ಬಗ್ಗೆ ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.