ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !
ಶಿವಮೊಗ್ಗ : ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.