ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ|
ಸಾಗರ : ಐಗಿನ ಬೈಲ್ ಬಳಿಯಲ್ಲಿ ಖಾಸಗಿ ಬಸ್ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ.
ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್ಬಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ ನ್ಯಾಯಾದೀಶರೊಬ್ಬರು ಶಿವಮೊಗ್ಗದಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತಿದ್ದ ಮತ್ತೊಂದು ಕಾರಿಗೂ ಬಸ್ ಡಿಕ್ಕಿಯಾಗಿದೆ ಎಂದು ಹೇಳಲಾಗಿದ್ದು, ಕಾರಿನಲ್ಲಿ ಮಾಂಸದ ಮೂಟೆಯು ಸಿಕ್ಕಿದ್ದು, ಅಲ್ಲಿದ್ದವರು, ದನದ ಮಾಂಸವನ್ನು ಕಾರಿನಲ್ಲಿ ಸಾಗಿಸುತ್ತಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಐಗಿನಬೈಲಿನ ಬಳಿಯ ತಿರುವಿನಲ್ಲಿ ಘಟನೆ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿದ ಬಸ್ ಎರಡು ಕಾರಿಗಳಿಗೆ ಡಿಕ್ಕಿ ಹೊಡೆದು ನಿಂತಿದೆ.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಆನಂದಪುರಂ ಪೊಲೀಸ್ ಸ್ಟೇಷನ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.