ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಮಾಂಸದ ಮೂಟೆ|

ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ|



ಸಾಗರ : ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ.

ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ  ನ್ಯಾಯಾದೀಶರೊಬ್ಬರು  ಶಿವಮೊಗ್ಗದಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.


ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತಿದ್ದ ಮತ್ತೊಂದು ಕಾರಿಗೂ ಬಸ್ ಡಿಕ್ಕಿಯಾಗಿದೆ ಎಂದು ಹೇಳಲಾಗಿದ್ದು, ಕಾರಿನಲ್ಲಿ ಮಾಂಸದ ಮೂಟೆಯು ಸಿಕ್ಕಿದ್ದು, ಅಲ್ಲಿದ್ದವರು, ದನದ ಮಾಂಸವನ್ನು ಕಾರಿನಲ್ಲಿ ಸಾಗಿಸುತ್ತಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.


ಐಗಿನಬೈಲಿನ ಬಳಿಯ ತಿರುವಿನಲ್ಲಿ ಘಟನೆ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿದ ಬಸ್ ಎರಡು ಕಾರಿಗಳಿಗೆ ಡಿಕ್ಕಿ ಹೊಡೆದು ನಿಂತಿದೆ.

ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಆನಂದಪುರಂ ಪೊಲೀಸ್ ಸ್ಟೇಷನ್​ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 hour ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

24 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago