ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರು ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನ ದುಷ್ಪರಿಣಾಮಗಳು ಎಂಬ ವಿಷಯವಾಗಿ ಡಾ|| ಹೆಚ್.ಕೆ ಶ್ರೀಪತಿ ಹಳಗುಂದರವರು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಕೆ ವೆಂಕಟೇಶ್‌ರವರು ವಹಿಸಲಿದ್ದು ಮುಖ್ಯ ಅತಿಥಿಯಾಗಿ ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಜಿಲ್ಲಾ ರಕ್ಷಣಾಧಿಕಾರಿ ಮಿಥನ್‌ಕುಮಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಮಾರುತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್ ಯಡಗೆರೆ, ಜಿಲ್ಲಾ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್ ಮಂಜುನಾಥ್, ಜಿಲ್ಲಾ ಪತ್ರಕರ್ಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ ಇನ್ನೂ ಮುಂತಾದವರು ಆಗಮಿಸಲಿದ್ದಾರೆ.

ಈ ಸಮಾರಂಭದಲ್ಲಿ ಜಿಲ್ಲಾ ಪತ್ರಿಕಾ ಮಾಧ್ಯಮ ಪುರಸ್ಕೃತರಿಗೆ, ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ತಾಲ್ಲೂಕಿನಲ್ಲಿ ಹೆಚ್ಚು ಅಂಕ ಪಡೆದವರಿಗೆ ಹಾಗೂ ತಾಲ್ಲೂಕಿನ ಆಯ್ದ ಪತ್ರಿಕಾ ವಿತರಿಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ತಾಲ್ಲೂಕಿನ ಎಲ್ಲಾ ಪತ್ರಕರ್ತರು ಹಾಗೂ ಸಾರ್ವಜನಿಕರು, ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಕೊಡಬೇಕೆಂದು ಈ ಮೂಲಕ ಕೇಳಿಕೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

23 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

24 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago