ನಿರಾಶಾದಾಯಕ ಬಜೆಟ್ – ಅರ್ ಎ ಚಾಬುಸಾಬ್|budget 23-24

ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದ್ದು, ಅತಿ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹೆಚ್ಚಿನ ಒತ್ತು ನಿಡುವಲ್ಲಿ ಎಡವಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ವಿಶ್ಲೇಷಿಸಿದ್ದಾರೆ.

ಪಟ್ಟದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಪ್ರೋತ್ಸಾಹವಿಲ್ಲದ ಪ್ರಗತಿಹೀನ ಬಜೆಟ್ ಆಗಿದ್ದು ರಾಜ್ಯದ ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್‍ನಲ್ಲಿ ಇಲ್ಲವೇ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು ವಾಗ್ದಾನ ನೀಡಿದ್ದರೋ ಅದರ ಅನುಷ್ಠಾನಕ್ಕೆ ಕರ್ನಾಟಕದ ಗರಿಷ್ಠ ತೆರಿಗೆ ಹಣವನ್ನು ಮೀಸಲಿಡುವ ಥರ ಆಗಿದೆ ಎಂದು ವಿಶ್ಲೇಷಿಸಿದ್ದಾರೆ.

ಮುಂದಿನ ಕರ್ನಾಟಕ ನಿರ್ಮಾಣದ, ಅಭಿವೃದ್ಧಿಗೆ ಪೂರಕ ಅಂಶಗಳು ಈ ಬಜೆಟ್‍ನಲ್ಲಿ ಇಲ್ಲವೇ ಇಲ್ಲ. ಮುಂದಿನ ಕರ್ನಾಟಕ ನಿರ್ಮಾಣದ ದಾರಿಯೂ ಸುಗಮವಾಗಿ ಕಂಡುಬರುವುದಿಲ್ಲ. ಗೆಲುವಿಗೆ ಸೀಮಿತವಾಗಿರುವ ಗ್ಯಾರಂಟಿ ಆಗಿದೆಯೇ ಹೊರತು ಅದರಿಂದ ಮಾನವ ವಿಕಾಸ ಕಾಣುತ್ತಿಲ್ಲ. ಈಗಾಗಲೇ ಅವರು ಘೋಷಿಸಿದ ಅನೇಕ ಯೋಜನೆಗಳನ್ನು ನಮ್ಮ ಜೆಡಿಎಸ್ ಸರಕಾರ ಮಾಡಿ ತೋರಿಸಿದೆ. ಕೆಲವು ಸಮುದಾಯಗಳು ತಮ್ಮ ವಾರಸುದಾರರು ಎಂಬ ರೀತಿಯಲ್ಲಿ ಬಜೆಟ್ ಒಳಗಡೆ ಎಲ್ಲ ಅಂಶಗಳನ್ನು ಸೇರಿಸಿದ್ದಾರೆ. ದೊಡ್ಡ ರೀತಿಯ ಸಾಲದ ಬಲೆಯ ಒಳಗೆ ರಾಜ್ಯ ಸಿಲುಕಲಿದೆ. ಮೊದಲ ವರ್ಷವೇ ದೊಡ್ಡ ಪ್ರಮಾಣದ ಸಾಲವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕವು ಹಿಂದೊಮ್ಮೆ ಕೋವಿಡ್ ನಿರ್ವಹಣೆ ಸೇರಿ ಅಭಿವೃದ್ಧಿಗಾಗಿ ಹೂಡಿಕೆಗೆ ಸಾಲ ತೆಗೆದುಕೊಂಡದಿದ್ದಿದೆ. ಆದರೆ, ಇಲ್ಲಿ ಚುನಾವಣಾ ಗ್ಯಾರಂಟಿ ಅನುಷ್ಠಾನಕ್ಕಾಗಿ ಸಾಲ ಮಾಡುವಂಥ ದಯನೀಯ ಸ್ಥಿತಿಗೆ ಸರಕಾರ ತೆಗೆದುಕೊಂಡು ಹೋಗಿದೆ. ಜೆಡಿಎಸ್ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಹೆಚ್ ಡಿ‌ ಕುಮಾರಸ್ವಾಮಿರವರನ್ನು ದೂಷಿಸುವುದು, ತನ್ಮೂಲಕ ರಾಜಕೀಯ ಬಂಡವಾಳ ಮಾಡಿಕೊಂಡು ಮುಂದಿನ ಲೋಕಸಭಾ ಚುನಾವಣೆಯ ಲಾಭದತ್ತ ನೋಡುವುದು ಎದ್ದು ಕಾಣಿಸುತ್ತಿದೆ ಎಂದು ವಿವರಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

40 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago