ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ

ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು.

ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು.


ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ ಅನಾದಿ ಕಾಲದಿಂದಲೂ ಋಷಿ ಮುನಿಗಳ ಆಶೀರ್ವಾದದಿಂದ ನಾಗರೀಕ ಸಮಾಜ ಸಮೃದ್ಧಿಯಾಗಿ ಸಂಸ್ಕಾರವAತವಾಗಿ ಬೆಳೆದಿರುವುದು ನಾವು ಇತಿಹಾಸದ ಪುಟಗಳಲ್ಲಿ ನೋಡುತ್ತೇವೆ. ಇಂತಹ ಇತಿಹಾಸ ಪ್ರಸಿದ್ಧ, ಸಂಸ್ಕಾರವಂತ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕೆಲಸ ಕಾರ್ಯಗಳು ನಡೆಯುತ್ತಿರುವುದು ದುಃಖಕರ ಸಂಗತಿ.

ಯಾವುದೇ ಒಂದು ಧರ್ಮದ ಅನುಯಾಯಿಗಳಿರಬಹುದು ಅನ್ಯತಾವಾಗಿ ಯಾರಿಗೂ ಹಿಂಸೆ ಮಾಡಬಾರದು ಎನ್ನುವುದು ನಮ್ಮ ಭಾರತದ ಧರ್ಮದ ತಿರುಳಾಗಿದೆ. ಸಾಮಾನ್ಯ ಜನರಲ್ಲಿ ಈ ರೀತಿಯ ಕೊಲೆಯಾಗುತ್ತಿರುವ ಘಟನೆಯನ್ನು ನಾವು ನೋಡುತ್ತಿದ್ದೆವು. ಆದರೆ ಕೆಲವು ವರ್ಷಗಳಲ್ಲಿ ಸಾಧು ಸಂತರಿಗೆ ಹಲ್ಲೇ ಮಾಡುತ್ತಿರುವುದು ಇಡಿ ನಮ್ಮ ದೇಶಕ್ಕೆ ತಲೆತಗ್ಗಿಸುವ ವಿಚಾರ.

ಇತ್ತೀಚಿನ ನಾಲ್ಕೈದು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಹೀರೇಕೋಡಿ ಗ್ರಾಮದಲ್ಲಿ ದಿಗಂಬರ ಆಚಾರ್ಯ ಮುನಿಶ್ರೀಗಳವರನ್ನು ಅಮಾನುಷವಾಗಿ ಕೊಲೆಮಾಡಿದ ಘಟನೆ ನಮ್ಮ ಸಮಾಜಕ್ಕೆ ತಲೆತಗ್ಗಿಸುವ ವಿಷಯವಾಗಿದೆ.

ಈ ದೇಶದಲ್ಲಿ ಕಾನೂನಿಗೆ ಭಯವಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ನಾವು ಇಂದು ಭಾರತ ಸರ್ಕಾರ ಕರ್ನಾಟರ ರಾಜ್ಯ ಸರ್ಕಾರ ಎಲ್ಲ ಕಾನೂನಿಗೆ ಸಂಬಂಧಪಟ್ಟವರಿಗೆ ನಿವೇದಿಸಿಕೊಳ್ಳುವುದೇನೆಂದರೆ ಎಲ್ಲಾ ಸಮಾಜದವರಿಗೆ ಭಯದ ವಾತಾವರಣ ಇದೆ. ಒಬ್ಬ ಸಾಧು ಸಂತರನ್ನೇ ಈ ರೀತಿಯಾಗಿ ಮಾಡಿದ್ದಾರೆಂದರೆ ಸಾಮಾನ್ಯ ಜನರ ಯಾವ ರೀತಿ ನಾಳೆ ತೊಂದರೆಯಾಗಬಹುದು ಈ ಘಟನೆಯಿಂದ ನಮಗೆಲ್ಲ ತಿಳಿದಿದೆ.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರದವರು ಈಗಾಗಲೇ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದು ಒಳ್ಳೆಯ ರೀತಿಯ ಕಾನೂನು ಜಾರಿಗೆ ಬರಬೇಕು. ಇಂತಹ ಕೃತ್ಯಗಳು ಇನ್ನು ಮುಂದೆ ನಡೆಯಬಾರದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.

ಹೊಂಬುಜದ ದಿಗಂಬರ ಜೈನ ಸಮಾಜದವರು, ಸಾರ್ವಜನಿಕರು ಹಾಗೂ ಜಯಕರ್ನಾಟಕ ವೇದಿಕೆಯ ಕಾರ್ಯಕರ್ತರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

10 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

10 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

14 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

16 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

17 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago