ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news

ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ ಪದೇ ಫೋನ್ ಮಾಡಿ ಪ್ರೀತಿಸುವಂತೆ ಪ್ರದೀಪ್ ಪೀಡಿಸುತ್ತಿದ್ದ ಎಂದು ಭವ್ಯಾ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ.

ಪ್ರದೀಪನ ಹಿಂಸೆ ತಾಳಲಾರದೆ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಭವ್ಯಾಳ ಸಹೋದರ ಪೊಲೀಸರಿಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *