ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ.

ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.

ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ ಕಂಡುಬರುತ್ತಿದೆ. ಇದರಿಂದ ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಡ್ಯಾಂನಿಂದ ನೀರು ಹೊರಹರಿಸುವ ಸಾಧ್ಯತೆಗಳಿವೆ.


ಬರಿದಾಗುವ ಹಂತದಲ್ಲಿತ್ತು : ಒಟ್ಟಾರೆ ಡ್ಯಾಂ ನೀರಿನ ಸಂಗ್ರಹಣ ಸಾಮರ್ಥ್ಯ 3.24 ಟಿಎಂಸಿ ಆಗಿದೆ. ಪ್ರಸ್ತುತ ಮುಂಗಾರು ಮಳೆ ವಿಳಂಬದ ಕಾರಣದಿಂದ ಡ್ಯಾಂ ನೀರಿನ ಸಂಗ್ರಹದಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡುಬಂದಿತ್ತು. ಇದೀಗ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಡ್ಯಾಂ ಗರಿಷ್ಠ ಮಟ್ಟಕ್ಕೆ ಬರಲಾರಂಭಿಸಿದೆ.

ತುಂಗಾ ನದಿ ಪಾತ್ರದಲ್ಲಿ ಎಚ್ಚರವಹಿಸಲು ಕರ್ನಾಟಕ ನೀರಾವರಿ ನಿಗಮ ಮನವಿ

ತುಂಗಾ ಡ್ಯಾಂ ಗರಿಷ್ಠ ಮಟ್ಟಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಡ್ಯಾಂನಿಂದ ನದಿಗೆ ಯಾವ ಸಮಯದಲ್ಲಿ ಬೇಕಾದರು ನೀರು ಹೊರಹರಿಸುವ ಸಾಧ್ಯತೆಯಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಬಿ.ಸುರೇಶ್ ಅವರು ತಿಳಿಸಿದ್ದಾರೆ.

ಈ ಕುರಿತಂತೆ ಅವರು ಬುಧವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ಧಾರೆ. ಡ್ಯಾಂ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದೆ. ಡ್ಯಾಂ ಒಳಹರಿವಿನಲ್ಲಿ ಏರಿಕೆ ಕಂಡುಬರಲಾರಂಭಿಸಿದೆ. ತುಂಗಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ನಾಗರೀಕರು ಎಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago