ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಗುರುವಾರ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಸ್ಥಳೀಯ ನಗರಸಭೆ ಸದಸ್ಯ ಸೈಯದ್ ಜಾಕೀರ್, ಶಾಲಾಭಿವೃದ್ಧಿ ಸಮಿತಿ ರಶೀದ್, ಅಕ್ಬರ್ ಖಾನ್ ಇನ್ನಿತರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…