ರಿಪ್ಪನ್ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.
9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ.
ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪರ್ಯಾಯ ಮಾರ್ಗ
ರಿಪ್ಪನ್ಪೇಟೆಯಿಂದ ಆನಂದಪುರ ಮಾರ್ಗವಾಗಿ ಆಯನೂರು
ರಿಪ್ಪನ್ಪೇಟೆ – 9 ನೇ ಮೈಲಿಕಲ್ಲು – ಬಸವಾಪುರ – 5 ಎಮ್ ಎಸ್ – ಆಯನೂರು