ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.


ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ ಅವಕಾಶ, ಸಬಲೀಕರಣ, ಬಡತನದ ಚಕ್ರವನ್ನು ಮುರಿಯುವುದು, ಸರ್ಕಾರಿ ಶಾಲೆಗಳನ್ನು  ಬೆಂಬಲಿಸುವುದು ಹಾಗೂ ಸಮುದಾಯದ ಅಭಿವೃದ್ಧಿ ಆಗುವ ನಿಟ್ಟಿನಲ್ಲಿ  ಶಾಲಾ ಕಿಟ್ ಗಳನ್ನು ವಿತರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾದಾಪುರದ ಎಸ್ ಟಿ ಎಂ ಸಿ ಅಧ್ಯಕ್ಷರಾದ  ಹಾಲಪ್ಪ ರವರು ವಹಿಸಿದ್ದರು.

ಮಾದಾಪುರ ಶಾಲೆಯ ಶಿಕ್ಷಕಿಯಾದ ಫೌಜಿಯ ಸರವತ್ ಶಿಕ್ಷಕರು ಪ್ರಾಸ್ತಾವಿಕ ನುಡಿಯಲ್ಲಿ ಯುವ ಬೆಂಗಳೂರು ಟ್ರಸ್ಟ್ ನ ಪರಿಚಯ ಹಾಗೂ ಉದ್ದೇಶಗಳನ್ನು ತಿಳಿಸಿದರು.

ನಾಗರಾಜ್ ಸಮೂಹ ಸಂಪನ್ಮೂಲ ವ್ಯಕ್ತಿಗಳು ಅರಸಾಳು ಕ್ಲಸ್ಟರ್ ರವರು ಮಾತನಾಡಿ ಯುವ ಟ್ರಸ್ಟ್ ನೀಡಿರುವ ಸಾಮಗ್ರಿಗಳ ಸಮರ್ಪಕ ಬಳಕೆ ಆಗಬೇಕು ಎಂದು ತಿಳಿಸಿದರು.


ಈ ಸುಸಂದರ್ಭದ ನೆನಪಿಗಾಗಿ ಹೊಸನಗರ ತಾಲೂಕ್ ವೃಕ್ಷ ಜಾಗೃತಿ ಸಂಘದ ಅಧ್ಯಕ್ಷರಾದ ಮಂಜುನಾಥ್ ನೇತೃತ್ವದಲ್ಲಿ 50 ಅಡಿಕೆ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಸರಸ್ವತಿ ಗಣಪತಿ, ವಿಜಿಯಣ್ಣ,ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ,ಸಹ ಶಿಕ್ಷಕಿ ಶಶಿಕಲಾ, ಎಸ್. ಡಿ.ಎಂ.ಸಿ ಸದಸ್ಯರು, ಗ್ರಾಮಸ್ಥರು ಹಾಗೂ ಪೋಷಕರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 hour ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

24 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago