ಮುದ್ದೇಬಿಹಾಳದಲ್ಲಿ ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ

ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.25 ರಂದು ಬೆಳಗ್ಗೆ 10.30 ಕ್ಕೆ ರಾಘವೇಂದ್ರ lಮಂಗಲ ಭವನದಲ್ಲಿ ಪತ್ರಿಕಾ ದಿನಾಚರಣೆ, ಪದಾಧಿಕಾರಿಗಳ ಪದಗ್ರಹ ಹಾಗೂ ವಿಕಲಚೇತನರಿಗೆ ಸೌಲಭ್ಯಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲೂಕಾಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಕಾರ್ಯಕ್ರಮದ
ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸುವರು.ಗುರುತಿನ ಕಾರ್ಡ್ ಗಳನ್ನು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ವಿತರಣೆ ಮಾಡುವರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು‌. ಕಾನಿಪ ಧ್ವನಿ ಸಂಘದ ಉಪಾಧ್ಯಕ್ಷ ಅನಿಲ್ ಹಡಪದ(ತೇಲಂಗಿ) ಮಾತನಾಡಿ,ವಿಕಲಚೇತನರಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮ ವಿಶೇಷವಾಗಿದ್ದು ಪತ್ರಿಕಾ ಸಂಘಟನೆ ದಾನಿಗಳ ನೆರವಿನಿಂದ ದಿವ್ಯಾಂಗರಿಗೆ ಆಸರೆ ಒದಗಿಸುವ ಕಾರ್ಯ ಮಾಡುತ್ತಿದೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಂತ ಪೂಜಾರಿ ಸೌಲಭ್ಯಗಳ ವಿತರಣೆ ಮಾಡುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ತಾಲೂಕಾ ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ್ ನಡಹಳ್ಳಿ, ಬಾಲಾಜಿ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶಗೌಡ ಪಾಟೀಲ,ಬ.ಬಾಗೇವಾಡಿ ಕೃಷಿ ಅಧಿಕಾರಿ ಅರವಿಂದ ಹೂಗಾರ,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ,ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ,ಕಾನಿಪ ಧ್ವನಿ ಸಂಘಟನೆ ಜಿಲ್ಲಾಧ್ಯಕ್ಷ ಯೂಸೂಫ್ ನೇವಾರ,ಪ್ರಧಾನ ಕಾರ್ಯದರ್ಶಿ  ವಿನಾಯಕ ಸೊಂಡೂರ,ವಿದ್ಯಾಸ್ಪೂರ್ತಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಬಸಮ್ಮ ಸಿದರೆಡ್ಡಿ,ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ತಾಳಿಕೋಟೆ ಹಿರಿಯ ಪತ್ರಕರ್ತ ಜಿ.ಟಿ.ಘೋರ್ಪಡೆ,ಮನಿಯಾರ ಸೇವಾ ಟ್ರಸ್ಟ್ ಅಧ್ಯಕ್ಷ ಅಯೂಬ್ ಮನಿಯಾರ,ಕಾನಿಪ ಧ್ವನಿ ಸಂಘಟನೆ ಜಿಲ್ಲಾ ಪದಾಧಿಕಾರಿಗಳಾದ ಮಾರುತಿ ಹಿಪ್ಪರಗಿ, ರವಿ ತೇಲಂಗಿ,ರವಿ ದಂಡಿನ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗುಲಾಮೊಹ್ಮದ ದಫೇದಾರ,ಖಜಾಂಚಿ ಹಣಮಂತ ನಲವಡೆ ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

7 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

20 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

22 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago