ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ
ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಹಾಲಾಡಿ ಮೂಲ ಕುಟುಂಬ ಶಿವಮೊಗ್ಗ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿರುವಾಗ ತೀರ್ಥಹಳ್ಳಿಯಿಂದ ಬಿದಿರು ಗೋಡು ಕಡೆಗೆ ಹೋಗುತ್ತಿರುವ ಖಾಸಗಿ ಬಸ್ ಕಾರಿಗೆ ಹೊಡೆದಿದೆ.
ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ ಅವರನ್ನ ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.