ರಿಪ್ಪನ್ ಪೇಟೆ : ಪಟ್ಟಣದ ಗವಟೂರಿನಲ್ಲಿ ನೂತನವಾಗಿ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ.
ಗವಟೂರಿನ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರವಿಗೆ ಸರ್ಕಾರದಿಂದ ಲೈಸೆನ್ಸ್ ದೊರತ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಮದ್ಯದ ಲೋಡ್ ನ್ನು ಇಳಿಸುತ್ತಿದ್ದಾಗ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಮದ್ಯ ತುಂಬಿದ್ದ ವಾಹನವನ್ನು ತಡೆ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆದಿದ್ದು ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಮದ್ಯ ತುಂಬಿದ್ದ ವಾಹನವನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಇಂದು ಬೆಳಗ್ಗೆಯಿಂದಲೇ ಗವಟೂರು ಗ್ರಾಮದ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಪೊಲೀಸ್ ಠಾಣೆ ಮುಂಭಾಗದಲ್ಲಿ ನೆರೆದಿದ್ದು ಯಾವುದೇ ಕಾರಣಕ್ಕೂ ನಮ್ಮ ಗವಟೂರಿನಲ್ಲಿ ನೂತನ ಮಧ್ಯದಂಗಡಿ ಪ್ರಾರಂಭಿಸಬಾರದು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
ನಮಗೆ ಸರ್ಕಾರದಿಂದ ಲೈಸೆನ್ಸ್ ದೊರೆತಿದ್ದು ಆ ಹಿನ್ನಲೆಯಲ್ಲಿ ಬಾರ್ ತೆರೆಯಲು ಮುಂದಾಗಿದ್ದೇವೆ ಸನ್ನದು ನೀಡಲು ಅಬಕಾರಿ ಆಯುಕ್ತರು, ಖುದ್ದು ಸ್ಥಳ ಪರಿಶೀಲನೆಯ ಬಳಿಕವೇ ಅನುಮತಿ ನೀಡಿದ್ದು ಹೀಗಾಗಿ ನಮಗೆ ರಕ್ಷಣೆ ನೀಡಬೇಕೆಂದು ನೂತನ ಬಾರ್ ಮಾಲೀಕರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಡಿ ವೈ ಎಸ್ ಪಿ ಗಜಾನನ ವಾಮನಸುತರ ಆಗಮಿಸಿದ್ದು ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿ ಸ್ಥಳಕ್ಕೆ ಅಬಕಾರಿ ಜಿಲ್ಲಾಧಿಕಾರಿಯನ್ನು ಕರೆಸುವ ಭರವಸೆ ನೀಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್