ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಾಪುರ ಹಾಗೂ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಮಾದಾಪುರ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ವಿಜಯ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ಬಾಳೂರು ಗ್ರಾಮದ ಕಿರಾಣಿ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಶ್ರೀನಿವಾಸ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ,ಸಂತೋಷ್ ಕೊರವರ ಮತ್ತು ಮಧುಸೂಧನ್ ಇದ್ದರು.