ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.
ಪಟ್ಟಣದ ಸಮೀಪದ ವರಾನಹೊಂಡದ ಮುಖ್ಯರಸ್ತೆಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಮೂಗೂಡ್ತಿ ಕಡೆಗೆ ತೆರಳುತಿದ್ದ ಹೀರೋ ಹೊಂಡ ಸ್ಪ್ಲೆಂಡರ್ ಬೈಕ್ ಗೆ ನರಿ ಅಡ್ಡ ಬಂದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿ ಉಪನ್ಯಾಸಕ ಶ್ರೀಧರ್(50) ರವರಿಗೆ ತಲೆ ಹಾಗೂ ಕೈ ಗೆ ಗಂಭೀರ ಗಾಯಗಳಾಗಿದ್ದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜೀವನ್ಮರಣ ಹೋರಾಟದಲ್ಲಿದ್ದ ನರಿಗೆ ಸ್ಪಂದಿಸಿದ ಅರಣ್ಯ ಇಲಾಖೆ
ಬೈಕ್ ಅಪಘಾತದಲ್ಲಿ ಅಡ್ಡ ಬಂದಿದ್ದ ನರಿಗೆ ಗಂಭೀರವಾಗಿ ಗಾಯವಾಗಿದ್ದು ಘಟನೆ ನಡೆದ ಸ್ಥಳದಲ್ಲಿಯೇ ಜೀವನ್ಮರಣ ಹೋರಾಟದಲ್ಲಿದ್ದ ನರಿಯನ್ನು ಗಮನಿಸಿದ ಪತ್ರಕರ್ತ ರಫ಼ಿ ರಿಪ್ಪನ್‌ಪೇಟೆ ಮತ್ತು ಶಿವಾನಿ ರಾಘು ಸಂಬಂಧಪಟ್ಟ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ.
ಮಾಹಿತಿಗೆ ಸ್ಪಂದಿಸಿದ ಹೊಸನಗರ RFO ರಾಘವೇಂದ್ರ ಮತ್ತು ಅರಸಾಳು RFO ಬಾಬು ರಾಜೇಂದ್ರ ಪ್ರಸಾದ್ ಸ್ಥಳಕ್ಕೆ ಸಿಬ್ಬಂದಿಗಳಾದ ನದಾಫ಼್ ,ಅನಿಲ್ ಮತ್ತು ಅಕ್ಷಯ್ ಕುಮಾರ್ ರವರನ್ನು ಕಳುಹಿಸಿಕೊಟ್ಟಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಸಿಬ್ಬಂದಿಗಳು ಖಾಸಗಿ ಪಶು ವೈದ್ಯಾಧಿಕಾರಿ ಶರತ್ ರವರನ್ನು ಕರೆಸಿ ಜೀವನ್ಮರಣ ಹೋರಾಟದಲ್ಲಿದ್ದ ನರಿಗೆ ಸೂಕ್ತ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಅರಣ್ಯ ಕಛೇರಿಗೆ ಸ್ಥಳಾಂತರಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಂದನೆಗೆ ಸಾರ್ವಜನಿಕವಾಗಿ ಪ್ರಶಂಸೆಯ ನುಡಿಗಳು ವ್ಯಕ್ತವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್