ರಿಪ್ಪನ್‌ಪೇಟೆ : ಜು.22ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ : ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ


ರಿಪ್ಪನ್‌ಪೇಟೆ;-ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ  ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ದೇಯವಾಕ್ಯದಂತೆ  ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷö್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆಯ ರೋಟರಿ ಕ್ಲಬ್ ಸಭಾಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇದೇ 22 ರಂದು ಶನಿವಾರ ಸಂಜೆ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ 2023-24 ನಾಲಿನ “ಪದವಿ ಸ್ವೀಕಾರ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜಿ.ಎಸ್.ಬಿ.ಕಲ್ಯಾಣ ಮಂದಿರಲ್ಲಿ ಆಯೋಜಿಸಲಾಗಿದೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಕಟಪೂರ್ವ ಆಧ್ಯಕ್ಷೆ ಪ್ರಮೀಳ ಎಲ್.ಗೌಡ ವಹಿಸುವರು ಎಂದರು.


2023-24 ನೇ ಸಾಲಿಗೆ ರೋಟರಿ ಕ್ಲಬ್ ಅಧ್ಯಕ್ಷರಾಗಿ ದೇವದಾಸ್ ಮತ್ತು ಕಾರ್ಯದರ್ಶಿಯಾಗಿ ಎಂ ರಾಮಚಂದ್ರ ಆಯ್ಕೆಯಾಗಿದ್ದು ನೂತನ ಅಧ್ಯಕ್ಷ ದೇವದಾಸ ಆರ್.ಹೆಚ್. ಇವರಿಗೆ ಮಾಜಿ ಅಸಿಸ್ಟಂಟ್ ಗವರ್ನರ್ ವಲಯ 11 ವಸಂತ್ ಹೋಬಳಿದಾರ್ ಪದವಿ ಪ್ರಧಾನವನ್ನು  ಮಾಡುವರು.ಅಸಿಸ್ಟಂಟ್ ಗವರ್ನರ್ ವಲಯ 11 ರ ರವಿಕೋಟೋಜಿ.ಮತ್ತು ಝೋನಲ್ ಲೆಪ್ಟಿನೆಂಟ್ ಚಂದ್ರಪ್ಪ ಕೆ.ಟಿ.ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು

ನೂತನ ಅಧ್ಯಕ್ಷ ದೇವದಾಸ್ ಆರ್ ಹೆಚ್ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ರೋಟರಿ ಕ್ಲಬ್ ಮೌಲ್ಯಧಾರಿತ ಶಿಕ್ಷಣ ಮತ್ತು ಮಣ್ಣಿನ ಫಲವತ್ತತೆಯ ಸಂರಕ್ಷಣೆ  ಹಾಗೂ ಇ.ತ್ಯಾಜ್ಯ ನಿರ್ವಹಣೆ .ಸುರಕ್ಷತ ವಾಹನ ಚಾಲನೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ ಮತ್ತು ಕ್ಲಬ್ ಇತರ ಕಾರ್ಯಕ್ರಮಗಳಾದ ರಕ್ತ ದಾನ ಶಿಬಿರ,ನೇತ್ರ ತಪಾಸಣೆ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ, ರೈತ ಮಿತ್ರ, ಶಿಕ್ಷಕರಿಗೆ ಸನ್ಮಾನ,ಅಂಗಾಂಗ ದಾನದ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ ಮಳೆಕೊಯ್ಲು,ಆಯ್ದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಕಲಿಕಾ ಸಾಮಗ್ರಿಗಳ ವಿತರಣೆ ಇಂತಹ  ಜನಪರ ಕಾರ್ಯಕ್ರಮಗಳನ್ನು ರೋಟರಿ ಕ್ಲಬ್ ಹಮ್ಮಿಕೊಂಡಿದೆ ಎಂದರು.

ಈ ಸುದ್ದಿಗೋಷ್ಠಿಯಲ್ಲಿ  ರೋಟರಿ ಕ್ಲಬ್ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳ ಎಲ್.ಗೌಡ,ಕಾರ್ಯದರ್ಶಿ ಎಂ.ರಾಮಚಂದ್ರ, ಗಣೇಶಕಾಮತ್,ಜೆ.ರಾಧಾಕೃಷ್ಣ,ಡಾಕಪ್ಪ,ಎಂ.ಬಿ.ಮಂಜುನಾಥ, ರಾಧಾಕೃಷ್ಣ ಹೆಚ್.ಎಂ.ವರ್ತೇಶ್‌ಗೌಡರು, ಸುದೀಂದ್ರ ಹೆಬ್ಬಾರ್,ಡಾಕಪ್ಪ, ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 hour ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

3 hours ago

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

15 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

19 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

21 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

23 hours ago