ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.


ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.


ಪಟ್ಟಣದ  , ಶಬರೀಶನಗರ,ಗಾಂಧಿನಗರ,ಪ್ರಗತಿನಗರ,ಕುವೆಂಪು ಬಡಾವಣೆ,ಚೌಡೇಶ್ವರಿ ಬೀದಿ,ಹಳೇ ಸಂತೆ ಮಾರುಕಟ್ಟೆ ರಸ್ತೆ,ಬನ್ನಿ ನಗರ ,ವಿದ್ಯಾನಗರ,ವಿನಾಯಕ ನಗರ ,ತಿಲಕ್ ನಗರ ,ಮದೀನಾ ಕಾಲೋನಿ ,ಶ್ರೀರಾಮ ನಗರ,ನೆಹರು ಬಡಾವಣೆ ಸೇರಿದಂತೆ ಪಟ್ಟಣದ ನಾಲ್ಕು‌ಮುಖ್ಯ  ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಹಿಡಿಶಾಪ:

ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಗ್ರಾಮಡಳಿತಕ್ಕೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಮೀನಮೇಷ ಎಣಿಸುತ್ತಿರುವ ಪರಿಣಾಮ ಸಾರ್ವಜನಿಕರು ಗ್ರಾಮಾಡಳಿತಕ್ಕೆ ಹಿಡಿಶಾಪ ಹಾಕುತ್ತಿದಾರೆ.

ಬೀದಿನಾಯಿಗಳ ಹಾವಳಿ ತಡೆಗಟ್ಟಲು ಸರ್ಕಾರದ ಆದೇಶ ಏನಿದೆ.??


ರಾಜ್ಯದಲ್ಲಿ ಬೀದಿ ನಾಯಿ (Street Dogs) ಗಳ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಫೆಬ್ರವರಿಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದೆ.

ರಾಜ್ಯಾದ್ಯಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದು, ನಗರಾಭಿವೃದ್ಧಿ ಇಲಾಖೆ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಲಾಗಿದೆ.

ಇಲಾಖೆ ಹೊರಡಿಸಿರುವಂತ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಪಂ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣ ಯೋಜನೆಯನ್ನು ಕೈಗೊಳ್ಳುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಹೇಳಿದೆ.

ಈ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವುದರಿಂದ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣವಾಗುವುದರ ಜೊತೆಗೆ ನಾಯಿ ಕಡಿತ ಮತ್ತು ರೆಬೀಸ್ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದೆ. ಎಬಿಸಿ ನಿಯಮದಡಿಯಲ್ಲಿ ರಾಜ್ಯಾದ್ಯಂತ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಣಗೊಳಿಸಲು, ಕೆಲ ಮಾರ್ಗಸೂಚಿ ಕ್ರಮಗಳನ್ನು ಕೂಡ ಇಲಾಖೆ ಹೊರಡಿಸಿದೆ.

ಒಟ್ಟಾರೆಯಾಗಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು‌ ನೀಡದ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರು ಎಚ್ಚೆತ್ತುಕೊಂಡು ಬಿದಿನಾಯಿಗಳ ಉಪಟಳವನ್ನು ನಿಯಂತ್ರಿಸಲು ಮುಂದಾಗುವರೋ‌ ಕಾದು ನೋಡಬೇಕಾಗಿದೆ……
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

4 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

4 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

19 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

19 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago