ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಆಸ್ಪತ್ರೆಗೆ ದಾಖಲು
ರಿಪ್ಪನ್ಪೇಟೆ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿ ನಡೆದಿದೆ.
ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಗರ್ತಿಕೆರೆ ನಿವಾಸಿ ನವೀನ್ ಎಂಬಾತನಿಗೆ ಗಂಭೀರ ಪೆಟ್ಟಾಗಿದೆ.
ಗರ್ತಿಕೆರೆಯಿಂದ ರಿಪ್ಪನ್ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಪಲ್ಸರ್ ಮತ್ತು ರಿಪ್ಪನ್ಪೇಟೆ ಕಡೆಯಿಂದ ಜ್ಯೋತಿ ಮಾಂಗಲ್ಯ ಮಂದಿರದ ಕಡೆಗೆ ತೆರಳುತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಕರಡಿಗ ನಿವಾಸಿ ನಾರಾಯಣ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗರ್ತಿಕೆರೆಯ ನವೀನ್ ಗೆ ತಲೆ ಹಾಗೂ ಕೈ ಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸುವಂತೆ ವೈದ್ಯರು ತಿಳಿಸಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಾಟ್ಸಾಪ್ ನಲ್ಲಿ ಈ ಅಪಘಾತದ ಬಗ್ಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಕಿಡಿಗೇಡಿಗಳು ಸುಳ್ಳುಸುದ್ದಿ ಹಬ್ಬಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್