ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ


ರಿಪ್ಪನ್‌ಪೇಟೆ : ವ್ಯಕ್ತಿಯ ಮರಣಾನಂತರ ಆರೋಗ್ಯಯುತ ಕಣ್ಣುಗಳು ಇಬ್ಬರು ಅಂಧರ ಪಾಲಿಗೆ ಬೆಳಕಾಗುತ್ತವೆ. ಪ್ರಾಣಬಿಟ್ಟು ಆರು ಗಂಟೆಗಳೊಳಗಾಗಿ  ನೇತ್ರಗಳನ್ನು ಸುರಕ್ಷಿತವಾಗಿ ಶೇಖರಿಸಲು ಸಾಧ್ಯವಾದಲ್ಲಿ ನೇತ್ರ ಚಿಕಿತ್ಸೆಯ ಮೂಲಕ ಅಂಧರಿಗೆ ದೃಷ್ಟಿಭಾಗ್ಯ ಲಭಿಸುತ್ತದೆ. ಅದಕ್ಕಾಗಿ ನೇತ್ರದಾನದ ಅರಿವನ್ನು ವಿಶೇಷವಾಗಿ ಯುವಜನತೆಗೆ ಮೂಡಿಸುವ ಅಗತ್ಯವಿದೆ ಎಂದು ಶಿವಮೊಗ್ಗದ ಹರಕೆರೆ ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞರಾದ ಡಾ|| ಬೃಂದಾ ನಾಯ್ಕ್ ಅವರು ಅಭಿಪ್ರಾಯಪಟ್ಟರು.

ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾಯೋಜನೆ, ಮತ್ತು ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಉಚಿತ ನೇತ್ರ ತಪಾಸಣೆ ಮತ್ತು ನೇತ್ರದಾನ ಪ್ರತಿಜ್ಞಾ ಶಿಬಿರ’ದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತಾ ಕಣ್ಣು ಅತ್ಯಂತ ಸೂಕ್ಷ್ಮ ಅಂಗವಾಗಿದ್ದು ಕಣ್ಣಿನ ಆರೋಗ್ಯದ ಕುರಿತಾಗಿಯೂ ಕಾಳಜಿವಹಿಸಬೇಕೆಂದು ಕರೆ ನೀಡಿದರು.

ಶಂಕರ ಕಣ್ಣಿನ ಆಸ್ಪತ್ರೆಯ ಪ್ರದೀಪ. ಆರ್. ಎಸ್. ಅವರು ಕಣ್ಣಿನ ಚಿಕಿತ್ಸೆಯ ವಿಧಾನಗಳು ಮತ್ತು ಶಂಕರ್ ಆಸ್ಪತ್ರೆಯಲ್ಲಿನ ಸೌಲಭ್ಯಗಳಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ. ಟಿ. ವಹಿಸಿದ್ದರು. ಡಾ. ಎಚ್. ಎಸ್. ವಿರೂಪಾಕ್ಷಪ್ಪ, ನರೇಂದ್ರ ಕುಳಗಟ್ಟೆ. ಎಂ. ಆರ್, ಹರ್ಷ ಕುಮಾರ್ ಕೆ. ಆರ್, ದೇವರಾಜ್ ಆರ್, ಶಿಲ್ಪಾ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ನಂತರ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಸಾರ್ವಜನಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆ ನಡೆಸಲಾಯಿತು. 189 ಜನರು ಕಣ್ಣಿನ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಮಾರ್ಗದರ್ಶನ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ೧೩೭ ಜನ ನೇತ್ರದಾನಕ್ಕೆ ನೋಂದಣಿ ಮಾಡಿಸಿಕೊಂಡರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

6 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

22 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

22 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

23 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago