ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು.
ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು.
ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು ಅರ್ಧ ಟನ್ ನಷ್ಟು ಪ್ಲಾಸ್ಟಿಕ್ ಸಂಗ್ರಹಿಸಿ ಗ್ರಾಮ ಪಂಚಾಯಿತಿಗೆ ನೀಡಲಾಯಿತು.
ಈ ಸಂಧರ್ಭದಲ್ಲಿ ಶಿಬಿರಾಧಿಕಾರಿಗಳಾದ ದೇವರಾಜ್ , ಶಿಲ್ಪ ಮತ್ತು ಬೆಳ್ಳೂರು ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು.