ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ|Madhu bangarappa

ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ  ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ  ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ.
ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ  ಸುರಿಯುತ್ತಿರುವ  ಮಳೆ- ಗಾಳಿಯಿಂದ  ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಹಾನಿಗೊಳಗಾದ ನಷ್ಟದ ಕುರಿತು  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.


ಪಟ್ಟಣದ ಗ್ರಾಮ ಪಂಚಾಯತಿ ಯ ಕುವೆಂಪುಸಭಾಭವನದಲ್ಲಿ ಇಂದು  ಆಯೋಜಿಸಿದ್ದ  ಸಭೆಯಲ್ಲಿ  ಅವರು ಮಾತನಾಡಿ, ಮಳೆಯಿಂದ ಮನೆ ಹಾಗೂ ಕೊಟ್ಟಿಗೆ  ಹಾನಿಗೊಳಗಾದಲ್ಲಿ ಆ ಕುಟುಂಬಕ್ಕೆ  ಜಿಲ್ಲಾಧಿಕಾರಿಗಳ  ನೆರೆ ಸಂತ್ರಸ್ತ ನಿಧಿಯಿಂದ  ತಕ್ಷಣವೇ ರೂ 10,000  ಪರಿಹಾರ ಕಲ್ಪಿಸಬೇಕು ಪೂರ್ಣ ಮನೆ ಕಳೆದುಕೊಂಡವರಿಗೆ ಬದಲಿ ವ್ಯವಸ್ಥೆ ಮಾಡಿಕೊಡಬೇಕು ಎಂದು ಸ್ಥಳದಲ್ಲಿ ಇದ್ದ  ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅಡಿಕೆ ಬೆಳೆಗಾರರಿಗೆ   ವಿಮಾ ಸೌಲಭ್ಯ ಮಾಡಿಸಲು ಕೇಂದ್ರ  ಸರ್ಕಾರ ಜುಲೈ 31 ಅಂತಿಮ ಗಡುವು  ನಿಗದಿಪಡಿಸಿದೆ. ವಿವಿಧ ಬೆಳೆಗಳ  ವಿಮೆ ಯೋಜನೆಯ ಅವಧಿ ಕುರಿತು  ಗ್ರಾಮೀಣ ಭಾಗದ ಪ್ರತಿಯೊಬ್ಬ ರೈತರಿಗೂ, ಅಧಿಕಾರಿ ವರ್ಗದವರು  ಸಮಗ್ರ ಮಾಹಿತಿ ನೀಡಬೇಕು ಎಂದರು.

ಪ್ರತಿಯೊಬ್ಬ ಬೆಳೆಗಾರರಿಗೂ  ಈ ಯೋಜನೆಯ ಸೌಲಭ್ಯ ಪಡೆದು ಕೊಳ್ಳಲು  ತಿಳಿಸಿದರು.ಮಲೆನಾಡಿನ ಅಡಿಕೆ ತೋಟಗಳಲ್ಲಿ  ಕಾಣಿಸಿಕೊಂಡಿರುವ
ಎಲೆ ಚುಕ್ಕಿ ರೋಗ ನಿಯಂತ್ರಣ ತಡೆಗೆ  ನುರಿತ ತಜ್ಞರಿಂದ  ಸಲಹೆ  ಪಡೆದು ಬೆಳೆಗಾರರಿಗೆ ಮಾಹಿತಿ ನೀಡುವಂತೆ  ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಮಳೆಯಿಂದ 13 ಮನೆಗಳು ಭಾಗಶಃ  ಹಾನಿ, 3 ಮನೆ ಸಂಪೂರ್ಣ ಹಾನಿ, 3 ದನದ ಕೊಟ್ಟಿಗೆ  ಕುಸಿದು ಬಿದ್ದಿವೆ.


ನವಟೂರು ಗ್ರಾಮದಲ್ಲಿ  ಭಾರಿ ಮಳೆಯಿಂದ  ಕೆರೆ ದಂಡೆ ಒಡೆದು ನೀರು ನುಗ್ಗಿದ ಪರಿಣಾಮ 2 ಎಕರೆ ನಾಟಿ ಮಾಡಿದ ಗದ್ದೆ ಕೊಚ್ಚಿಹೋಗಿದೆ. ಹಾಗೂ ಐದು ಜಾನುವಾರುಗಳು ಸಾವನ್ನಪ್ಪಿವೆ ಎಂದು ಸಚಿವರಿಗೆ  ಮಾಹಿತಿ ನೀಡಿದರು.ಮಲೆನಾಡಿನಲ್ಲಿ  ಮಳೆ ಪ್ರಮಾಣ ಹೆಚ್ಚಳಗೊಂಡಿರುವುದರಿಂದ ಅಧಿಕಾರಿ ವರ್ಗದವರು  ಸ್ವ ಸ್ಥಳದಲ್ಲಿಯೇ ಇದ್ದು, ಅನಾಹುತಗಳ ಕುರಿತು  ಕ್ಷೇತ್ರದ ಶಾಸಕರ ಗಮನಕ್ಕೆ ತಂದು ಸರ್ಕಾರಕ್ಕೆ ಮಾಹಿತಿ ರವಾನಿಸಬೇಕು  ಎಂದರು.

ಸಾಗರ ಕ್ಷೇತ್ರದ ಶಾಸಕ  ಬೇಳೂರು ಗೋಪಾಲಕೃಷ್ಣ ಮಾತನಾಡಿ,
ಹಿಂದಿನ ರಾಜ್ಯ ಸರ್ಕಾರ  ನೆರೆ ಸಂದರ್ಭದಲ್ಲಿ  ಮನೆ ಹಾನಿಗಳಿಗೆ ಜಾರಿಗೊಳಿಸಿದ  ಎ.ಬಿ.ಸಿ. ಮಾನದಂಡ ಅವೈಜ್ಞಾನಿಕವಾಗಿದ್ದು, ಬಡ ಹಾಗೂ ಮಧ್ಯಮ ವರ್ಗದವರಿಗೆ   ಪೂರ್ಣ ಪ್ರಮಾಣದ ಮನೆ ನಿರ್ಮಿಸಿಕೊಳ್ಳಲು   ಪೂರ್ಣ ಪ್ರಮಾಣದ ಪರಿಹಾರ ಕಲ್ಪಿಸಬೇಕು ಎಂದರು.

ಈ ಕುರಿತು  ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಜಿಲ್ಲಾ ಸಚಿವರು  ತಿಳಿಸಿದರು.

ಪದವಿ ಪೂರ್ವ ಕಾಲೇಜ್‌ಗಳಲ್ಲಿ ಕಾರ್ಯನಿರ್ವಹಿಸಿದ  ಸುಮಾರು
3, 500ಕ್ಕೂ ಅಧಿಕ ಅತಿಥಿ  ಉಪನ್ಯಾಸಕರಿಗೆ ಕಳೆದ ಸಾಲಿನ  ಗೌರವ ಸಂಭಾವನೆ  ಹಾಗೂ  ದ್ವಿತೀಯ ಪಿಯುಸಿ  ಮೌಲ್ಯಮಾಪಕರ  ವೇತನ ಪಾವತಿಯಾಗದ ಕುರಿತು  ಮಾಧ್ಯಮದವರು ಸಚಿವರ ಗಮನ ಸೆಳೆದಾಗ,  ಈ ಕುರಿತು  ತ್ವರಿತವಾಗಿ ಹಣ  ಬಿಡುಗಡೆಗೆ ಕ್ರಮಕೈಗೊಳ್ಳವ ಭರವಸೆ ನೀಡಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್,ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಾಹಣಾಧಿಕಾರಿ ನೇಹಲ್ ಸುಧಾಕರ್ ಲೋಕಖಂಡೆ,ಸಾಗರ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ಡಿಡಿಪಿಐ ಪರಮೇಶ್ವರಪ್ಪ, ತಹಶೀಲ್ದಾರ್ ಡಿ.ಜಿ.ಕೋರಿ, ಬಿ.ಇ.ಓ. ಹೆಚ್.ಆರ್.ಕೃಷ್ಣಮೂರ್ತಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟನಾಯ್ಕ್,  ತಾ.ಪ.ಇ. ಓ ನರೇಂದ್ರ, ಗ್ರಾ.ಪಂ. ಮಂಜುಳಾ ಕೇತಾರ್ಜಿ ರಾವ್. ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ, ಗ್ರಾಮ ಪಂಚಾಯತಿ ಸದಸ್ಯರು, ವಿವಿಧ ಇಲಾಖೆಯ  ಅಧಿಕಾರಿ ವರ್ಗದವರು  ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

5 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

21 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

21 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

21 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago