ಯಶವಂತಪುರ – ಶಿವಮೊಗ್ಗ (16581 Town Express) ರೈಲಿಗೆ ಸಿಲುಕಿ ತರಬೇತಿಯಲ್ಲಿರುವ ಪೊಲೀಸ್ ಸಿಬ್ಬಂದಿಯ ಕಾಲು ತುಂಡಾಗಿದೆ.
ಈ ಘಟನೆ ಶಿವಮೊಗ್ಗ ನಗರದ ಮಹಾದೇವಿ ಟಾಕೀಸ್ ಬಳಿ ಇರುವ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಇವತ್ತು ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಗರಾಜ್ ಎಂಬವರ ಕಾಲು ಕಟ್ ಆಗಿದ್ದು, ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಯಶವಂತಪುರದಿಂದ ಬರುತ್ತಿದ್ದ ಟ್ರೈನ್ನಲ್ಲಿ ನಾಗರಾಜ್ ರವರು ಆಗಮನಿಸಿದ್ದಾರೆ. ನಿಲ್ದಾಣದ ಬಳಿ ಅವರು ಇಳಿಯುವಾಗ ಎಡವಿ ಟ್ರೈನ್ಗೆ ಕಾಲು ಸಿಲುಕಿಕೊಂಡಿದೆ. ತಕ್ಷಣವೇ ಅಲ್ಲಿದ್ದವರು ಬಂದು ನಾಗರಾಜ್ರನ್ನ ರಕ್ಷಿಸಿದ್ಧಾರೆ.
ಮೂಲತಃ ತುಮಕೂರಿನ ಕುಣಿಗಲ್ ಮೂಲದವರಾದ ನಾಗರಾಜ್, ಕಡೂರಿನಲ್ಲಿರುವ ಪೊಲೀಸ್ ತರಭೇತಿ ಸಂಸ್ಥೆಯಲ್ಲಿ ತರಭೇತಿ ಪಡೆಯುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.
