Headlines

ರೈಲಿಗೆ ಸಿಲುಕಿ ಯುವಕನ ಕಾಲು‌ ಮುರಿತ|train accident

ಯಶವಂತಪುರ – ಶಿವಮೊಗ್ಗ (16581 Town Express)  ರೈಲಿಗೆ ಸಿಲುಕಿ ತರಬೇತಿಯಲ್ಲಿರುವ ಪೊಲೀಸ್ ಸಿಬ್ಬಂದಿಯ ಕಾಲು ತುಂಡಾಗಿದೆ.

ಈ ಘಟನೆ ಶಿವಮೊಗ್ಗ ನಗರದ ಮಹಾದೇವಿ ಟಾಕೀಸ್ ಬಳಿ ಇರುವ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಇವತ್ತು ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಗರಾಜ್​ ಎಂಬವರ ಕಾಲು ಕಟ್ ಆಗಿದ್ದು, ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಯಶವಂತಪುರದಿಂದ ಬರುತ್ತಿದ್ದ ಟ್ರೈನ್​ನಲ್ಲಿ ನಾಗರಾಜ್​ ರವರು ಆಗಮನಿಸಿದ್ದಾರೆ. ನಿಲ್ದಾಣದ ಬಳಿ ಅವರು ಇಳಿಯುವಾಗ ಎಡವಿ ಟ್ರೈನ್​ಗೆ ಕಾಲು ಸಿಲುಕಿಕೊಂಡಿದೆ. ತಕ್ಷಣವೇ ಅಲ್ಲಿದ್ದವರು ಬಂದು ನಾಗರಾಜ್​ರನ್ನ ರಕ್ಷಿಸಿದ್ಧಾರೆ.

ಮೂಲತಃ ತುಮಕೂರಿನ ಕುಣಿಗಲ್ ಮೂಲದವರಾದ ನಾಗರಾಜ್​, ಕಡೂರಿನಲ್ಲಿರುವ ಪೊಲೀಸ್​ ತರಭೇತಿ ಸಂಸ್ಥೆಯಲ್ಲಿ ತರಭೇತಿ ಪಡೆಯುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

Exit mobile version