w
Headlines
Home » ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa

ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa

ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. 

ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ವಿಷಯದಲ್ಲಿ ಧಾರ್ಮಿಕ ವಿಚಾರವನ್ನು ಅಡ್ಡ ತರುವುದು ಬೇಡ ಎಂದು ಅವರು ಹೇಳಿದ್ದಾರೆ. ಅಡುಗೆ ತಯಾರಿಸುವಾಗ ಯಾವ ಕ್ರಮವನ್ನು ಅನುಸರಿಸಿದರೂ ಸಹ ಅದು ಆರೋಗ್ಯಕರವಾಗಿರುತ್ತದೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಆಧರಿಸಿರುತ್ತದೆ ಎಂದು ಹೇಳಿದ್ದಾರೆ.

ಗ್ಲೌಸ್ ಹಾಗೂ ತಲೆಗೆ ಕ್ಯಾಪ್ ಹಾಕಿಕೊಂಡು ಅಡುಗೆ ಮಾಡುವಂತೆ ಈಗಾಗಲೇ ತಿಳಿಸಲಾಗಿದೆ. ಆ ನಿಮಯವನ್ನು ಕಡ್ಡಾಯವಾಗಿ ಎಲ್ಲ ಆಹಾರ ತಯಾರಕರೂ ಅನುಸರಿಸಲೇ ಬೇಕು. ಅಡುಗೆ ಮಾಡುವ ವೇಳೆ ಬಳೆಗಳನ್ನು ತೆಗೆದು ಅಡುಗೆ ಮಾಡಿ ಎಂದು ಹೇಳಿರಬೇಕು. ಈಗಾಗಲೇ ಎರಡು ಪ್ರಕರಣಗಳಲ್ಲಿ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥಗೊಂಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.