ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.


ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ, ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.

ಬಿಜೆಪಿ ಯುವ ಮೋರ್ಚದ ಜಿಲ್ಲಾಧ್ಯಕ್ಷ ಹರಿಕೃಷ್ಣ, ಮತ್ತು ಕಾರ್ಯಕರ್ತರಾದ ಜಗದೀಶ್, ದರ್ಶನ್, ಪ್ರದೀಪ್ ವಿಶ್ವನಾಥ್ ಮೊದಲಾದವರು ಸಭೆಗೆ ಸಚಿವರು ಬರುತ್ತಿದ್ದಂತೆ ಪ್ರತಿಭಟನೆ ನಡೆಸಿದರು. ವೀರ ಸಾವರ್ಕರ್ ರವರ ಪಠ್ಯವನ್ನು ಶಾಲಾ ಪುಸ್ತಕಗಳಲ್ಲಿ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಯುವ ಮೋರ್ಚಾ ಈ ಪ್ರತಿಭಟನೆಯನ್ನು ನಡೆಸಿದೆ.


ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಏಕಾಏಕಿ ಸಭಾಂಗಣದ ಒಳಗೆ ಪ್ರವೇಶ ಮಾಡಿ ಪ್ರತಿಭಟನೆ ನಡೆಸಿದ್ದು, ನೆರೆದವರಿಗೆ ಇರುಸುಮುರುಸು ಉಂಟುಮಾಡಿತ್ತು. ಅಲ್ಲದೆ, ಸೂಕ್ತ ಭದ್ರತೆಯನ್ನು ಒದಗಿಸಿರಲಿಲ್ಲವೇ ಎಂಬ ಅನುಮಾನ ಮೂಡಿಸಿತ್ತು. ಇನ್ನೂ ಸ್ವತಃ ಎಸ್​ಪಿ ಮಿಥುನ್ ಕುಮಾರ್ ವೇದಿಕೆಯಿಂದ ಎದ್ದುಬಂದು ಪ್ರತಿಭಟನಾಕಾರರನ್ನು ಹೊರಕ್ಕೆ ತಳ್ಳಿದರು.

ಇನ್ನೂ ಪ್ರತಿಭಟನಾಕಾರರು ಹೊರಕ್ಕೆ ಬರುತ್ತಲೇ ಪೊಲೀಸರು ಎಲ್ಲರನ್ನು ಎತ್ತಿಕೊಂಡು ಹೋಗಿ ಜೀಪ್​ನಲ್ಲಿ ಕೂರಿಸಿ ಕರೆದೊಯ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

4 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

20 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

20 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

20 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago