ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯ – ಸಂಸದ ಬಿ ವೈ ರಾಘವೇಂದ್ರ|press day


ಶಿವಮೊಗ್ಗ : ಪತ್ರಿಕಾ ಮಾಧ್ಯಮ ಯಾವತ್ತೂ ವಿರೋಧ ಪಕ್ಷದಂತೆ ಕೆಲಸ ಮಾಡಬೇಕು. ಹೀಗಾದಲ್ಲಿ ಆಳುವ ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

 ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯವಾಗಿರುತ್ತದೆ. ನಕಾರಾತ್ಮಕ ವರದಿಗಾರಿಕೆ ಮಾಡುವವರನ್ನು ಸಮಾಜ ಒಪ್ಪುವುದಿಲ್ಲ. ಸಮಾಜಮುಖಿಯಾದ ಸಕಾರಾತ್ಮಕ ಪತ್ರಿಕೋದ್ಯಮಕ್ಕೆ ಯಾಗಾಗಲೂ ಓದುಗರ ಬೆಂಬಲ ಇರುತ್ತದೆ. ಬದಲಾದ ದಿನಮಾನದಲ್ಲಿ ಪತ್ರಿಕೋದ್ಯಮ ಸಂಕ್ಷದಲ್ಲಿದೆ. ಪ್ರಾಮಾಣಿಕ ಪತ್ರಕರ್ತರು ಬಡವರಾಗಿಯೇ ಜೀವನ ಮುಗಿಸುತ್ತಾರೆ. ಆದರೆ ಅವರ ವೃತ್ತಿ ಬಗೆಗಿನ ಬದ್ಧತೆ ಮೆಚ್ಚುವಂತದ್ದು. ಶಿವಮೊಗ್ಗ ಎಲ್ಲಾ ಕ್ಷೇತ್ರಗಳಂತೆ ಈ ಕ್ಷೇತ್ರದಲ್ಲಿಯೇ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹೇಳಿದರು.


ವಿದಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಮಾತನಾಡಿ, ಪತ್ರಕರ್ತರಿಗೆ ಅಧ್ಯಯನ ಅಗತ್ಯವಿದೆ. ಅದರಲ್ಲೂ ಸಾಹಿತ್ಯಕ ಜ್ಞಾನ ಅಗತ್ಯವಾಗಿ ಬೇಕಾಗಿದೆ. ಪತ್ರಿಕಾ ರಂಗ ಪವಿತ್ರವಾದ ಮಾಧ್ಯಮವಾಗಿದೆ. ಇಲ್ಲಿ ಕೇವಲ ಸುದ್ದಿಗಳು ಮಾತ್ರ ಇರುವುದಿಲ್ಲ. ಜೀವನಕ್ಕೆ ಬೇಕಾದ ಎಲ್ಲಾ ವಿಷಯಗಳೂ ಇರುತ್ತವೆ. ಪತ್ರಿಕೆಗಳಲ್ಲಿ ಬರುವ ಅಂಕಣಗಳ ಮೂಲಕ ನಮ್ಮ ಬದುಕನ್ನೇ ತಿದ್ದಿಕೊಳ್ಳಬಹುದಾಗಿದೆ. ಪತ್ರಕರ್ತರು ಜಾಗೃತರಾಗಬೇಕು. ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ಶಿವಮೊಗ್ಗದಲ್ಲಿ ಪತ್ರಿಕೋದ್ಯಮ ಗಟ್ಟಿಯಾಗಿದೆ. ಅದಕ್ಕೆ ಪೂರಕವಾದ ವಾತಾವರಣವೂ ಇದೆ. ಪತ್ರಕರ್ತರ ಭವನದ ನವೀಕರಣಕ್ಕೆ ಸಂಸದರು ಮತ್ತು ಶಾಸಕರು ಮತ್ತಷ್ಟು ಅನುದಾನ ನೀಡಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಪತ್ರಕರ್ತರು ತಮ್ಮನ್ನು ತಾವು ಅವಲೋಕನ ಮಾಡಿಕೊಳ್ಳಬೇಕಾಗಿದೆ. ಪತ್ರಕರ್ತರ ಕಲ್ಯಾಣಕ್ಕಾಗಿ ಸಂಘ ಕೆಲಸ ನಿರ್ವಹಿಸುತ್ತಿದೆ. ಇದರ ಜೊತೆಗೆ ಮಾದಕ ವಸ್ತುಗಳ ವಿರೋಧಿ ದಿನಾಚರಣೆ, ಕುಗ್ರಾಮಗಳಿಗೆ ಭೇಟಿ, ಆರೋಗ್ಯ ಶಿಬಿರ ಮುಂತಾದ ಸಾಮಾಜಿಕ ಕಾರ್ಯಕ್ರಮಗಳಿಗೂ ಕೂಡ ಸಂಘ ಸ್ಪಂದಿಸುತ್ತದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿಯೇ ಮಾದರಿಯಾದ ಪತ್ರಿಕಾ ಭವನ ಮತ್ತು ಪ್ರೆಸ್‌ಮೀಟ್ ಹಾಲ್ ಶಿವಮೊಗ್ಗದಲ್ಲಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ ನಿವೇಶನ ಹೆಚ್ಚಿನ ಅನುದಾನ ಸಿಕ್ಕಿದೆ. ಪತ್ರಕರ್ತರ ಸಂಘ ಮತ್ತು ಪ್ರೆಸ್‌ಟ್ರಸ್ಟ್ ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಸದಾ ಶ್ರಮಿಸಲಿದೆ ಎಂದು ಹೇಳಿದರು. 

ಖಾದ್ರಿ ಶಾಮಣ್ಣ ಪ್ರಶಸ್ತಿ ಪುರಸ್ಕೃತ ಹೊನಕೆರೆ ನಂಜುಂಡೇಗೌಡ, ವಿ.ಎಸ್.ಕೆ. ಮಾಧ್ಯಮ ಪ್ರಶಸ್ತಿ ಪುರಸ್ಕೃತ ಎಂ. ಶ್ರೀನಿವಾಸನ್ ಅವರನ್ನು ಅಭಿನಂದಿಸಲಾಯಿತು. ಪತ್ರಿಕಾ ವಿತರಕರಾದ ಕೆ.ಎಸ್. ಕೃಷ್ಣಮೂರ್ತಿ, ಆರ್. ರಾಮಚಂದ್ರ, ಮುದ್ರಣ ವಿಭಾಗದ ತವಮಣಿ ಸಿ., ಹೆಚ್. ಶ್ರೀನಿವಾಸಲು, ಜಾಹೀರಾತು ವಿಭಾಗದ ಜೋಸೆಫ್‌ಟೆಲ್ಲಿಸ್, ಜೆ. ರಾಜಣ್ಣ, ಪುಟ ವಿನ್ಯಾಸಕಿಯರಾದ ಎ. ಸರೋಜ, ಹೆಚ್.ಕೆ. ಉಷಾ, ಭಾವಿತಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.  ಪ್ರಮುಖರಾದ ಎಸ್. ಚಂದ್ರಕಾಂತ್, ಶೃಂಗೇಶ್, ನಾಗರಾಜ್ ನೇರಿಗೆ, ಸಂತೋಷ್ ಕಾಚಿನಕಟ್ಟೆ, , ಗಿರೀಶ್ ಉಮ್ರಾಯ್, ವೈ.ಕೆ. ಸೂರ್ಯನಾರಾಯಣ, ಜೇಸುದಾಸ್ ಮತ್ತಿತರರಿದ್ದರು. ಲಕ್ಷ್ಮಿಪ್ರಸಾದ್ ಸ್ವಾಗತಿಸಿದರು. ವಿವೇಕ್ ಮಹಾಲೆ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ನಿತಿನ್ ಕೈದೊಟ್ಲು ಕಾರ್ಯಕ್ರಮ ನಿರೂಪಿಸಿದರು. ಕಿರಣ್ ಕಂಕಾರಿ ವಂದನೆ ಸಲ್ಲಿಸಿದರು.


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

5 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

22 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

24 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago