ಸೊರಬ: ರೈತನೊರ್ವ ಸಾಲಬಾಧೆಯಿಂದ ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದನು ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.