ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು.


ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು.

ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು.


ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಈ ಸಂಧರ್ಭದಲ್ಲಿ  ಆಪಾದಿಸಿದರು.

ಪ್ರತಿಭಟನೆ ನಿರತರಾಗಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಅಳಲನ್ನು ಆಲಿಸಿದ  ಅಧಿಕಾರಿಗಳು ಕೂಡಲೇ ಬೇರೆ ಉಪನ್ಯಾಸಕರೊಬ್ಬರನ್ನು ಪ್ರಾಚಾರ್ಯರ ಸ್ಥಾನಕ್ಕೆ ನಿಯೋಜಿಸಿದ ಬಳಿಕ ವಿದ್ಯಾರ್ಥಿಗಳ ಪ್ರತಿಭಟನೆ ಸ್ಥಗಿತಗೊಂಡಿತು.

ಪ್ರತಿಭಟನೆಯ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

2 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

6 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

6 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

21 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

21 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago