ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ

ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ ಬಗೆಹರಿಸುವಂತೆ ಶಾಸಕರ ಆಪ್ತ ವಲಯದ ಸಣ್ಣಕ್ಕಿ ಮಂಜು ಅವರಿಗೆ ತಿಳಿಸಿದರು. ಶಾಲಾ ಮಕ್ಕಳು ದೂರದ ಮುಳುಗಡೆ ಪ್ರದೇಶದಿಂದ 7 -8 ಕಿ.ಮೀ ನಡೆದುಕೊಂಡು ಬರಬೇಕಾಗಿದ್ದು ಅಲ್ಲದೆ ತೀರ ಬಡ ಕುಟುಂಬದ ಮಕ್ಕಳು ಆದ ಕಾರಣ ಕೂಡಲೇ ಮಕ್ಕಳ ಶಿಕ್ಷಣಕ್ಕೆ ಸ್ಪಂದಿಸುವ ಮೂಲಕ ಈ ಸಮಸ್ಯೆ ಬಗೆಹರಿಸುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸಿದರು.

ತಾಲೂಕು ಪಂಚಾಯತ್ ಸಭಾಂಗಣಕ್ಕೆ ಪೋಷಕರು ಲಗ್ಗೆ ಇಟ್ಟ ವಿಷಯ ತಿಳಿದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವೈ ನರೇಂದ್ರ ಕುಮಾರ್ ಶಾಸಕರ ಕಚೇರಿಗೆ ಆಗಮಿಸಿ ಶಾಸಕರ ಆಪ್ತವಲಯದ ಸಣ್ಣಕ್ಕಿ ಮಂಜುರವರೊಂದಿಗೆ ಸಮಾಲೋಚನೆ ನಡೆಸಿ ತಕ್ಷಣ ತಾಲೂಕು ಹಿಂದುಳಿದ ವರ್ಗದ ಕಲ್ಯಾಣಾಧಿಕಾರಿ ರಾಘವೇಂದ್ರ ಅವರನ್ನು ಕರೆಸಿ ಸಮಾಲೋಚನೆ ನಡೆಸಿ ಇನ್ನೆರಡು ದಿನದಲ್ಲಿ ಈ ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೊಡಸೆಯ ಗಿರೀಶ್ ಕೃಷ್ಣಪ್ಪ,  ಕಲಾವತಿ,  ತೊಗರೆ ಕೃಷ್ಣಮೂರ್ತಿ,  ಮಂಜಪ್ಪ, ಹೆಬ್ಬುರಳಿ ಹರೀಶ ಪದ್ಮಾವತಿ, ಲೀಲಾವತಿ ಪುರುಷೋತ್ತಮ್ ಮೊದಲಾದವರು  ಉಪಸ್ಥಿತರಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

42 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago