ವಿಟಿಯು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹಾಗೂ 9ನೇ ರ‌್ಯಾಂಕ್ ಪಡೆದ JNNC ವಿದ್ಯಾರ್ಥಿನಿಯರು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ.ಕೆ.ವಂತಕರ್ ರಾಜ್ಯಕ್ಕೆ ಒಂಬತ್ತನೆ ರ‌್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ…