ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ. ಜಿಲ್ಲಾ ಪಂಚಾಯತ್ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…