ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri
ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…