ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk
ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…