ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??
ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…