ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಬಾಳೆಹೊನ್ನೂರು-ಕಳಸ ಮಾರ್ಗ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.
ತೆಪ್ಪದಗಂಡಿಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ನೆರವಿನಿಂದ ಮರ ತೆರವು ಕಾರ್ಯಾಚರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ ಎರಡು ಮರಗಳನ್ನು ತೆರವುಗೊಳಿಸಲಾಯಿತು.
ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿರುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ. ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದಾರೆ.
ವರದಿ:- ರಮೀಝ್ ಬಾಳೆಹೊನ್ನೂರು