ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ ಸಹೋದ್ಯೋಗಿಗಳು ಹಾಗೂ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಮಧುಬಂಗಾರಪ್ಪ, ಈಶ್ವರ್ ಖಂಡ್ರೆ, ಹೆಚ್ ಸಿ ಮಹದೇವಪ್ಪ, ಬಿ ನಾಗೇಂದ್ರ, ಹೆಚ್ ಕೆ ಪಾಟೀಲ್,ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಶಿವಮೊಗ್ಗ ಶಾಸಕ ಚನ್ನಬಸಪ್ಪ,ಶಾರದ ಪೂರ್ಯನಾಯ್ಕ್ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಂ ಎ ಪೊನ್ನಣ್ಣ ಹಾಗೂ ಶಿರಸಿ ಶಾಸಕ ಭೀಮಣ್ಣ ನಾಯ್ಕ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.